ಬೆಳ್ಳುಳ್ಳಿಯು ಹೆಚ್ಚು ಪೌಷ್ಟಿಕಾಂಶ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿದೆ.
ಸಾಮಾನ್ಯ ಶೀತದಂತಹ ಸಮಸ್ಯೆಗೆ ಬೆಳ್ಳುಳ್ಳಿ ಬಳಕೆ ಪ್ರಯೋಜನಕಾರಿ ಆಗಿದೆ.
ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಹಾಯಕವಾಗಿದೆ.
ಬೆಳ್ಳುಳ್ಳಿ ನಿಮ್ಮ ಒಟ್ಟು ಮತ್ತು ಎಲ್‌ಡಿಎಲ್ ಕೊಲೆಸ್ಟ್ರಾಲ್ ಎರಡನ್ನೂ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ದೈನಂದಿನ ಆಹಾರದಲ್ಲಿ ಬೆಳ್ಳುಳ್ಳಿ ಬಳಕೆಯಿಂದ ದೇಹದ ಪ್ರತಿರಕ್ಷಣಾ ವ್ಯವಸ್ಥೆ ಬಲಗೊಳ್ಳುತ್ತದೆ.
ಬೆಳ್ಳುಳ್ಳಿ ಬಳಕೆಯಿಂದ ಮೂಳೆಗಳ ಸವೆತ ಕಡಿಮೆ ಆಗುವುದರ ಜೊತೆಗೆ ಸಂಧಿವಾತದ ಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಬೆಳ್ಳುಳ್ಳಿಯ ಪ್ರಮುಖ ಆರೋಗ್ಯ ಪ್ರಯೋಜನಗಳಲ್ಲಿ ಒಂದು ಇದು ರಕ್ತವನ್ನು ಶುದ್ಧೀಕರಿಸುವ ಸಾಮರ್ಥ್ಯವನ್ನು ಹೊಂದಿದೆ.
ಬೆಳ್ಳುಳ್ಳಿ ಸೇವನೆಯು ಕೊಲೆಸ್ಟ್ರಾಲ್ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುವ ಮೂಲಕ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ.
ಬೆಳ್ಳುಳ್ಳಿ ಸೇವನೆಯು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹಲವು ಅಧ್ಯಯನಗಳಲ್ಲಿ ತಿಳಿದುಬಂದಿದೆ.
ಬೆಳ್ಳುಳ್ಳಿ ಅತ್ಯುತ್ತಮ ಆಂಟಿಬ್ಯಾಕ್ಟೀರಿಯಲ್ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದು ಸೋಂಕಿನ ವಿರುದ್ಧ ರಕ್ಷಣೆ ನೀಡುತ್ತದೆ.
ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.