Blood Pressure: ಬಿಪಿ ನಿಯಂತ್ರಣಕ್ಕೆ ಈ ಡ್ರೈ ಫ್ರೂಟ್ಸ್ ನಲ್ಲಿದೆ ಮದ್ದು
ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ವಾಲ್ ನಟ್ಸ್ ಸೇವಿಸಬೇಕು.
ಇದರಲ್ಲಿರುವ ಒಮೆಗಾ -3 ಕೊಬ್ಬಿನಾಮ್ಲಗಳು ಹೃದಯಾಘಾತ ಮತ್ತು ಇತರ ದೀರ್ಘಕಾಲದ ಕಾಯಿಲೆಗಳನ್ನು ತಡೆಯಲು ಸಹಾಯ ಮಾಡುತ್ತದೆ.
ವಾಲ್ ನಟ್ಸ್ ಸೇವನೆಯಿಂದ ಹೃದಯ ಸಂಬಂಧಿ ಸಮಸ್ಯೆಗಳು ದೂರವಾಗುತ್ತವೆ.
ಹೃದಯಾಘಾತ ಮತ್ತು ನರಗಳ ಸಮಸ್ಯೆಯಿಂದ ಬಳಲುತ್ತಿರುವವರು ವಾಲ್ ನಟ್ಸ್ ತಿನ್ನುವುದು ತುಂಬಾ ಒಳ್ಳೆಯದು ಎನ್ನುತ್ತಾರೆ ತಜ್ಞರು.
ಪ್ರತಿ ದಿನ ವಾಲ್ ನಟ್ಸ್ ಸೇವಿಸುವುದರಿಂದ ಜ್ಞಾಪಕ ಶಕ್ತಿಯೂ ಹೆಚ್ಚುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು.
ಇದು ಮೆದುಳಿನ ನರಗಳನ್ನು ಬಲಪಡಿಸಲು ಸಹ ಸಹಾಯ ಮಾಡುತ್ತದೆ. ಇದಲ್ಲದೆ, ಮೆದುಳಿನಲ್ಲಿ ಉರಿಯೂತ ಕಡಿಮೆಯಾಗುತ್ತದೆ.
ವಾಲ್ ನಟ್ಸ್ ಫೈಬರ್ ಗುಣಲಕ್ಷಣಗಳಲ್ಲಿ ಸಮೃದ್ಧವಾಗಿದೆ. ಹಾಗಾಗಿ ತೂಕ ಇಳಿಸಿಕೊಳ್ಳಲು ಬಯಸುವವರು ಪ್ರತಿದಿನ ನೀರಿನಲ್ಲಿ ನೆನೆಸಿಟ್ಟು ತಿನ್ನಬೇಕು.
ಇದು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿದೆ. ಆದ್ದರಿಂದ ಪ್ರತಿದಿನ ಬೆಳಗ್ಗೆ ಇವುಗಳನ್ನು ಸೇವಿಸುವುದರಿಂದ ಹಸಿವನ್ನು ನಿಯಂತ್ರಿಸಬಹುದು.
ಇದರಲ್ಲಿರುವ ಒಮೆಗಾ-3 ಕೊಬ್ಬಿನಾಮ್ಲಗಳು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದು ಹೃದಯದ ಕಾರ್ಯವನ್ನು ಸಹ ಸುಧಾರಿಸುತ್ತದೆ.