ವಿಟಮಿನ್ ಡಿ ಮೂಳೆಯ ಆರೋಗ್ಯಕ್ಕೆ ಸಂಬಂಧಿಸಿದ್ದಾಗಿದೆ.ದೇಹದಲ್ಲಿ ವಿಟಮಿನ್ ಡಿ ಕೊರತೆಯಾದರೆ ಸ್ನಾಯುಗಳನ್ನು ದುರ್ಬಲಗೊಳಿಸುತ್ತದೆ.ಇತ್ತೀಚಿನ ದಿನಗಳಲ್ಲಿ ದೇಹದಲ್ಲಿ ವಿಟಮಿನ್ ಡಿ ಕೊರತೆ ಕಂಡುಬರುತ್ತಿರುವುದು ಸಾಮಾನ್ಯ ಸಮಸ್ಯೆಯಾಗಿದೆ.
ದೇಹದಲ್ಲಿ ವಿಟಮಿನ್ ಡಿ ಕೊರತೆಯಾದಾಗ ಕೆಲವೊಂದು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಈ ಲಕ್ಷಣಗಳು ಕಂಡು ಬಂದಲ್ಲಿ ತಡ ಮಾಡದೆ ಪರೀಕ್ಷೆಗೆ ಒಳಪಡುವುದು ಉತ್ತಮ.
ಸಾಮಾನ್ಯಕ್ಕಿಂತ ಹೆಚ್ಚು ಕೂದಲು ಉದುರುತ್ತಿದ್ದರೆ ತಕ್ಷಣ ಎಚ್ಚೆತ್ತುಕೊಳ್ಳಿ. ಇದು ವಿಟಮಿನ್ ಡಿ ಕೊರತೆಯ ಲಕ್ಷಣವಾಗಿರಬಹುದು. ವಿಟಮಿನ್ ಡಿ ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಮಾತ್ರವಲ್ಲ ಕೂದಲನ್ನು ಬೇರುಗಳಿಂದ ಬಲಪಡಿಸುತ್ತದೆ.
ಹಠಾತ್ ತೂಕ ಹೆಚ್ಚಾಗುವುದು ವಿಟಮಿನ್ ಡಿ ಕೊರತೆಯ ಲಕ್ಷಣವಾಗಿರುತ್ತದೆ. ವಿಟಮಿನ್ ಡಿ ನಮ್ಮ ದೇಹಕ್ಕೆ ನೈಟ್ರಿಕ್ ಆಕ್ಸೈಡ್ ಅನ್ನು ನೀಡುತ್ತದೆ.ಇದು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ ಮತ್ತು ಚಯಾಪಚಯವನ್ನು ಹೆಚ್ಚಿಸುತ್ತದೆ. ಇದು ತೂಕ ನಿಯಂತ್ರಿಸಲು ಸಹಾಯ ಮಾಡುತ್ತದೆ. ವಿಟಮಿನ್ ಡಿ ಕೊರತೆಯು ತೂಕ ಹೆಚ್ಚಾಗಲು ಕಾರಣವಾಗಬಹುದು.
7 ರಿಂದ 8 ಗಂಟೆಗಳ ನಿದ್ದೆ ಮಾಡಿದ ನಂತರವೂ, ಸುಸ್ತು, ಆಲಸ್ಯವಾಗುತ್ತಿದ್ದರೆ, ಅದು ವಿಟಮಿನ್ ಡಿ ಕೊರತೆಯ ಲಕ್ಷಣವೂ ಆಗಿರಬಹುದು.
ಮಾತಿಗೆ ಮುನ್ನ ಸಿಡುಕುತನ, ಖಿನ್ನತೆಗೆ ಒಳಗಾಗುವುದು, ಸಣ್ಣ ಸಣ್ಣ ವಿಚಾರಗಳಿಗೆ ಅಳುವುದು ಸಹ ವಿಟಮಿನ್ ಡಿ ಕೊರತೆಯ ಸಂಕೇತವಾಗಿರುತ್ತದೆ. ವಿಟಮಿನ್ ಡಿಯನ್ನು ಸೂರ್ಯನ ಕಿರಣಗಳಿಂದ ನೈಸರ್ಗಿಕವಾಗಿ ಪಡೆಯಬಹುದು.
ಕೀಲುಗಳಲ್ಲಿ ನೋವು ಕಾಣಿಸಿಕೊಂಡರೆ, ಅದು ವಿಟಮಿನ್ ಡಿ ಕೊರತೆಯ ಲಕ್ಷಣವಾಗಿರಬಹುದು. ವಿಟಮಿನ್ ಡಿ ಕೊರತೆಯಿಂದಾಗಿ, ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಎದುರಾಗುತ್ತದೆ. ಇದರಿಂದಾಗಿ ಮೂಳೆಗಳು ಮತ್ತು ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಬೆನ್ನು ಅಥವಾ ಕೀಲುಗಳಲ್ಲಿ ನೋವು ಇದ್ದರೆ, ವಿಟಮಿನ್ ಡಿ ಪರೀಕ್ಷೆಯನ್ನು ಮಾಡಿಸಿಕೊಲ್ಲುವುದು ಸೂಕ್ತ.
ಅಣಬೆ, ಮೊಟ್ಟೆ, ಹಾಲು, ಸೋಯಾ ಹಾಲು, ಕಿತ್ತಳೆ ರಸ, , ಕೊಬ್ಬಿನ ಅಂಶಗಳಿರುವ ಮೀನು, ಇತ್ಯಾದಿಗಳನ್ನು ಸೇವಿಸುವುದರಿನದ ದೇಹದಲ್ಲಿನ ವಿಟಮಿನ್ ಡಿ ಕೊರತೆಯನ್ನು ನೀಗಿಸಬಹುದು.
ಸೂಚನೆ : ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಮನೆ ಮದ್ದನ್ನು ಆಧರಿಸಿದೆ. ಇದನ್ನು ಜೀ ನ್ಯೂಸ್ ಕನ್ನಡ ಅನುಮೋದಿಸುವುದಿಲ್ಲ.