ಪರಂಗಿಕಾಯಿ ತಿನ್ನುವುದರಿಂದ ಮಹಿಳೆಯರಿಗೆ ತುಂಬಾ ಲಾಭ
ಮಾಗಿದ ಪರಂಗಿ ಹಣ್ಣು ತಿನ್ನಲು ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೂ ಪ್ರಯೋಜನಕಾರಿ. ಕೇವಲ ಪರಂಗಿ ಹಣ್ಣಷ್ಟೇ ಅಲ್ಲ, ಪರಂಗಿ ಕಾಯಿಯೂ ಸಹ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.
ಪರಂಗಿಕಾಯಿ ವಿಟಮಿನ್‌ಗಳು, ಕಿಣ್ವಗಳು ಮತ್ತು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಹಾಗಾಗಿ ಪರಂಗಿ ಕಾಯಿ ಮಹಿಳೆಯರಿಗೆ ಪರಂಗಿಕಾಯಿ ವರದಾನವಿದ್ದಂತೆ ಎಂದು ಹೇಳಲಾಗುತ್ತದೆ.
ಪಪ್ಪಾಯಿಯ ಸೇವನೆಯಿಂದ ವಾಸಿಯಾಗದ ದೀರ್ಘಕಾಲದ ರೋಗಗಳು ಕೂಡ ಗುಣವಾಗುತ್ತವೆ.
ಪರಂಗಿ ಕಾಯಿ ಮಹಿಳೆಯರಿಗೆ ಮುಟ್ಟಿನ ಸಮಯದಲ್ಲಿ ಉಂಟಾಗುವ ನೋವನ್ನು ನಿವಾರಿಸಲು ಪ್ರಯೋಜನಕಾರಿ ಆಗಿದೆ.
ಪರಂಗಿಕಾಯಿ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ. ಇದರ ರಸವನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡಬಹುದು.
ಪರಂಗಿ ಕಾಯಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಾರಿಣಾಂಶವಿದ್ದು ಇದು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ.
ಪರಂಗಿ ಬೀಜಗಳಲ್ಲಿ ಸಾಕಷ್ಟು ಪ್ರಮಾಣದ ವಿಟಮಿನ್ ಎ, ಸಿ ಮತ್ತು ಇ ಕಂಡು ವರುತ್ತದೆ. ಇದು ಸೋಂಕುಗಳ ವಿರುದ್ಧ ನಮ್ಮನ್ನು ರಕ್ಷಿಸುತ್ತದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.