ಸಾಮಾನ್ಯವಾಗಿ ನೀವು ಕೆಂಪು ಕಲ್ಲಂಗಡಿಯನ್ನು ನೋಡಿರಬಹುದು. ಅದರಲ್ಲೂ ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ ಹೆಚ್ಚು ಬೇಡಿಕೆ ಇರುತ್ತದೆ. ಆದರೆ, ಕೆಂಪು ಕಲ್ಲಂಗಡಿಗಿಂತಲೂ ಹಳದಿ ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?
ಹಳದಿ ಕಲ್ಲಂಗಡಿ ರುಚಿಯಲ್ಲಿ ಕೆಂಪು ಕಲ್ಲಂಗಡಿಗಿಂತಲೂ ಹೆಚ್ಚು ಸಿಹಿಯಾಗಿರುತ್ತದೆ. ಬೇಸಿಗೆಯಲ್ಲಿ ಹಳದಿ ಕಲ್ಲಂಗಡಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಅವುಗಳೆಂದರೆ...
ಹಳದಿ ಕಲ್ಲಂಗಡಿ ಹಣ್ಣಿನಲ್ಲಿ ಕೊಬ್ಬಿಣ ಕೋಶಗಳನ್ನು ನಿಗ್ರಹಿಸುವ ಸಂಯುಕ್ತಗಳು ಹೇರಳವಾಗಿದ್ದು ತೂಕ ಇಳಿಕೆಗೆ ಪ್ರಯೋಜನಕರಿ ಎಂದು ಸಾಬೀತುಪಡಿಸಲಿವೆ.
ಹಳದಿ ಕಲ್ಲಂಗಡಿಯಲ್ಲಿ ವಿಟಮಿನ್ ಎ ಮತ್ತು ಕ್ಯಾರೊಟಿನಾಯ್ಡ್ ಸಮೃದ್ದವಾಗಿದ್ದು, ಇದು ದೃಷ್ಟಿ ದೋಷವನ್ನು ನಿವಾರಿಸುವಲ್ಲಿ ಪ್ರಯೋಜನಕಾರಿ ಆಗಿದೆ.
ಹಳದಿ ಕಲ್ಲಂಗಡಿಯ ಬಿಳಿ ಭಾಗದಲ್ಲಿ ಸಿಟ್ರುಲ್ಲೈನ್ ಅಂಶ ಸಮೃದ್ಧವಾಗಿದ್ದು, ಇದರ ಸೇವನೆಯಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಇದು ಹೃದಯದ ಆರೋಗ್ಯವನ್ನೂ ಸುಧಾರಿಸುತ್ತದೆ.
ಹಳದಿ ಕಲ್ಲಂಗಡಿ ಹಣ್ಣಿನಲ್ಲಿ ಪ್ರತಿಕಾಯಗಳ ಉತ್ಪಾದನೆ ಹೆಚ್ಚಿಸುವ ವಿಟಮಿನ್ ಬಿ 6 ಸಮೃದ್ಧವಾಗಿದ್ದು, ಇದು ದೇಹದಲ್ಲಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಳಪಡಿಸುತ್ತದೆ.
ಹಳದಿ ಕಲ್ಲಂಗಡಿ ಹಣ್ಣಿನಲ್ಲಿ ಫೈಬರ್ ಅಂಶ ಹೆಚ್ಚಾಗಿದ್ದು ಇದು ಆರೋಗ್ಯಕರ ಜೀರ್ಣಕ್ರಿಯೆಯನ್ನು ಕಾಪಾಡಿಕೊಳ್ಳುವಲ್ಲಿ ಪ್ರಯೋಜನಕಾರಿ ಆಗಿದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.