ನಿತ್ಯ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದರೆ ಸೊಂಟದ ಬೊಜ್ಜು ಅಂದುಕೊಂಡದಕ್ಕಿಂತ ವೇಗವಾಗಿ ಕರಗುತ್ತೆ!

Weight Loss Drinks: ಪ್ರತಿದಿನ ಹಾಲಿನ ಟೀ ಕುಡಿಯುವುದರಿಂದ ದೇಹಕ್ಕೆ ಹಲವಾರು ಅಡ್ಡ ಪರಿಣಾಮಗಳು ಉಂಟಾಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಬದಲಾಗಿ, ಉತ್ತಮ ಫಲಿತಾಂಶಕ್ಕಾಗಿ ಪ್ರತಿದಿನ ಕಪ್ಪು ಚಹಾವನ್ನು ಕುಡಿಯಿರಿ ಎಂದು ತಜ್ಞರು ಸಲಹೆ ನೀಡುತ್ತಾರೆ.

Written by - Bhavishya Shetty | Last Updated : Oct 8, 2023, 07:55 PM IST
    • ಉತ್ತಮ ಫಲಿತಾಂಶಕ್ಕಾಗಿ ಪ್ರತಿದಿನ ಕಪ್ಪು ಚಹಾವನ್ನು ಕುಡಿಯಿರಿ
    • ಇದರಲ್ಲಿ ದೇಹಕ್ಕೆ ಬೇಕಾದ ಹಲವಾರು ಔಷಧೀಯ ಗುಣಗಳಿವೆ
    • ಆಂಟಿ ಆಕ್ಸಿಡೆಂಟ್‌’ಗಳು ಕಪ್ಪು ಚಹಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ
ನಿತ್ಯ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದರೆ ಸೊಂಟದ ಬೊಜ್ಜು ಅಂದುಕೊಂಡದಕ್ಕಿಂತ ವೇಗವಾಗಿ ಕರಗುತ್ತೆ! title=
black tea for weight loss

Weight Loss Drinks: ಜಗತ್ತಿನಲ್ಲಿ ಚಹಾವನ್ನು ಇಷ್ಟಪಡದವರು ಯಾರಿದ್ದಾರೆ ಹೇಳಿ..! ಇನ್ನು ಈ ಪಾನೀಯವನ್ನು ಕುಡಿಯುವುದರಿಂದ ದೇಹಕ್ಕೆ ತ್ವರಿತ ಶಕ್ತಿಯನ್ನು ನೀಡುವುದು ಮಾತ್ರವಲ್ಲದೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ ಎಂದು ಹಲವರು ನಂಬುತ್ತಾರೆ.

ಇದನ್ನೂ ಓದಿ: ಗುರು ವಕ್ರಿ.. ಈ ರಾಶಿಗಳ ಧನ ಸಂಪತ್ತು ವೃದ್ಧಿ, ಇಷ್ಟಾರ್ಥ ಸಿದ್ಧಿಯಿಂದ ಪ್ರತಿ ಕೆಲಸದಲ್ಲಿ ಜಯ!

ಪ್ರತಿದಿನ ಹಾಲಿನ ಟೀ ಕುಡಿಯುವುದರಿಂದ ದೇಹಕ್ಕೆ ಹಲವಾರು ಅಡ್ಡ ಪರಿಣಾಮಗಳು ಉಂಟಾಗುತ್ತವೆ ಎನ್ನುತ್ತಾರೆ ಆರೋಗ್ಯ ತಜ್ಞರು. ಬದಲಾಗಿ, ಉತ್ತಮ ಫಲಿತಾಂಶಕ್ಕಾಗಿ ಪ್ರತಿದಿನ ಕಪ್ಪು ಚಹಾವನ್ನು ಕುಡಿಯಿರಿ ಎಂದು ತಜ್ಞರು ಸಲಹೆ ನೀಡುತ್ತಾರೆ. ಇದರಲ್ಲಿ ದೇಹಕ್ಕೆ ಬೇಕಾದ ಹಲವಾರು ಔಷಧೀಯ ಗುಣಗಳಿವೆ. ಹಾಗಾದರೆ ಪ್ರತಿದಿನ ಬ್ಲ್ಯಾಕ್ ಟೀ ಕುಡಿಯುವುದರಿಂದ ಆಗುವ ಪ್ರಯೋಜನಗಳು ಏನೆಂಬುದು ತಿಳಿದುಕೊಳ್ಳೋಣ.

ಉತ್ಕರ್ಷಣ ನಿರೋಧಕಗಳು:

ಆಂಟಿ ಆಕ್ಸಿಡೆಂಟ್‌’ಗಳು ಕಪ್ಪು ಚಹಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಈ ಪಾನೀಯವನ್ನು ನಿತ್ಯ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಅನೇಕ ರೋಗಗಳಿಂದ ಮುಕ್ತರಾಗಬಹುದು. ಜೊತೆಗೆ ದೇಹದಲ್ಲಿರುವ ವಿಷಕಾರಿ ಅಂಶಗಳು ಹೊರ ಬರುತ್ತವೆ.

ಹೃದಯದ ಆರೋಗ್ಯಕ್ಕೆ ಒಳ್ಳೆಯದು:

ಪ್ರತಿದಿನ ಬ್ಲ್ಯಾಕ್ ಟೀ ಕುಡಿಯುವುದರಿಂದ ಹೆಚ್ಚಿನ ಪೋಷಕಾಂಶಗಳು ಸಿಗುತ್ತವೆ. ಇದರಿಂದ ಹೃದಯವೂ ಆರೋಗ್ಯವಾಗುತ್ತದೆ. ಫ್ಲೇವನಾಯ್ಡ್‌’ಗಳು ಎಂಬ ಉತ್ಕರ್ಷಣ ನಿರೋಧಕಗಳು ಹೃದಯವನ್ನು ಆರೋಗ್ಯವಾಗಿಡುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಇದು ಹೃದಯಾಘಾತದ ಸಮಸ್ಯೆಗಳಿಂದ ಹೃದಯವನ್ನು ರಕ್ಷಿಸುತ್ತದೆ. ಈ ಬ್ಲ್ಯಾಕ್ ಟೀಯನ್ನು ಪ್ರತಿದಿನ ಕುಡಿದರೆ ಅಧಿಕ ರಕ್ತದೊತ್ತಡ, ಕೆಟ್ಟ ಕೊಲೆಸ್ಟ್ರಾಲ್ ಮತ್ತು ಬೊಜ್ಜಿನಿಂದ ಮುಕ್ತಿ ಸಿಗುತ್ತದೆ.

ಕರುಳಿನ ಆರೋಗ್ಯ:

ಪ್ರತಿದಿನ ಬ್ಲ್ಯಾಕ್ ಟೀ ಕುಡಿಯುವುದರಿಂದ ಕರುಳಿನ ಆರೋಗ್ಯ ಸುಧಾರಿಸುತ್ತದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಇದರಲ್ಲಿರುವ ಆಂಟಿ ಮೈಕ್ರೊಬಿಯಲ್ ಗುಣಲಕ್ಷಣಗಳು ಎಲ್ಲಾ ರೀತಿಯ ದೀರ್ಘಕಾಲದ ಕಾಯಿಲೆಗಳಿಂದ ಪರಿಹಾರವನ್ನು ನೀಡುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

ಇದನ್ನೂ ಓದಿ: ತೆಂಗಿನೆಣ್ಣೆ ಜೊತೆ ಈ ಗಿಡದ ಎಲೆಯನ್ನು ಬೆರೆಸಿ ತಲೆಗೆ ಹಚ್ಚಿ… ನಿಮಿಷಗಳಲ್ಲಿ ಶಾಶ್ವತವಾಗಿ ಕಪ್ಪಾಗುವುದು ಬಿಳಿಕೂದಲು!

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News