Seeds For Weight Loss: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತಮ್ಮ ಹೆಚ್ಚುತ್ತಿರುವ ತೂಕದ ಕಾರಣ ಚಿಂತಿತರಾಗಿದ್ದಾರೆ. ಏಕೆಂದರೆ ಇಂದಿನ ದಿನಗಳಲ್ಲಿ ಜನರ ಜೀವನ ತುಂಬಾ ಬ್ಯುಸಿಯಾಗಿದ್ದು, ವ್ಯಾಯಾಮ ಮಾಡಲು ಜನರಿಗೆ ಸಮಯ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜನರು ಸ್ಥೂಲಕಾಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಆದರೆ ನೀವು ಚಿಂತಿಸಬೇಕಾಗಿಲ್ಲ. ಏಕೆಂದರೆ ನೀವು ಸರಿಯಾದ ಆಹಾರ ಕ್ರಮವನ್ನು ಅನುಸರಿಸಿದರೆ ನೀವು ಸುಲಭವಾಗಿ ನಿಮ್ಮ ತೂಕವನ್ನು ಕಳೆದುಕೊಳ್ಳಬಹುದು ಮತ್ತು ಬೋಜ್ಜನ್ನು ನಿಯಂತ್ರಿಸಬಹುದು. ಹಾಗಾದರೆ ಬನ್ನಿ ತೂಕವನ್ನು ಇಳಿಕೆ ಮಾಡಿಕೊಳ್ಳಲು ನಿಮ್ಮ ಆಹಾರದಲ್ಲಿ ನೀವು ಯಾವ ಬೀಜಗಳನ್ನು ಸೇರಿಸಬಹುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

COMMERCIAL BREAK
SCROLL TO CONTINUE READING

ತೂಕ ಇಳಿಸಿಕೊಳ್ಳಲು ಈ ಬೀಜಗಳನ್ನು ಸೇವಿಸಿ
 ಅಗಸೆ ಬೀಜಗಳು

ಅಗಸೆ ಬೀಜಗಳು ಒಮೆಗಾ -3 ನ ಉತ್ತಮ ಮೂಲವೆಂದು ಪರಿಗಣಿಸಲಾಗುತ್ತದೆ. ಒಮೆಗಾ 3 ಫ್ಯಾಟಿ ಆಸಿಡ್ ನಿಮ್ಮ ದೇಹದಲ್ಲಿರುವ ಕೊಬ್ಬನ್ನು ಕರಗಿಸಲು ಕೆಲಸ ಮಾಡುತ್ತವೆ. ಇದಲ್ಲದೆ, ಅಗಸೆಬೀಜ ಕಬ್ಬಿಣ, ಪ್ರೋಟೀನ್ ಮತ್ತು ನಾರಿನಂಶದಿಂದ ಸಮೃದ್ಧವಾಗಿದೆ. ಇವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿವೆ. ನೀವೂ ಕೂಡ ವೇಗವಾಗಿ ತೂಕ ಇಳಿಸಿಕೊಳ್ಳಲು ಬಯಸುತ್ತಿದ್ದರೆ, ನೀವು ಅಗಸೆಬೀಜಗಳನ್ನು ಸೇವಿಸಬಹುದು. ನೀವು ಇದನ್ನು ಸ್ಮೂಥಿ, ಪಾನೀಯ, ತರಕಾರಿಗಳಲ್ಲಿ ಬೆರೆಸಿ ಕೂಡ ಸೇವಿಸಬಹುದು.

ಸೂರ್ಯಕಾಂತಿ ಬೀಜಗಳು
ಸೂರ್ಯಕಾಂತಿಯ ಬೀಜಗಳು ತೂಕವನ್ನು ಇಳಿಕೆ ಮಾಡಲು ತುಂಬಾ ಪ್ರಯೋಜನಕಾರಿಯಾಗಿವೆ. ನೀವು ಇವುಗಳನ್ನು ಸಲಾಡ್ ಅಥವಾ ಸೂಪ್ಗೆ ಸೇರಿಸುವ ಮೂಲಕ ತಿನ್ನಬಹುದು, ಸೂರ್ಯಕಾಂತಿ ಬೀಜಗಳು ವಿಟಮಿನ್ ಇ ಯ ಉತ್ತಮ ಮೂಲವಾಗಿವೆ. ಇದನ್ನು ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಹೆಚ್ಚಿನ ಕ್ಯಾಲೋರಿಗಳು ಕರಗುತ್ತವೆ. ಹೀಗಾಗಿ ನಿಮ್ಮ ಹೆಚ್ಚುತ್ತಿರುವ ತೂಕವನ್ನು ಇಳಿಕೆ ಮಾಡಲು ಇದು ನಿಮಗೆ ಸಹಾಯ ಮಾಡುತ್ತದೆ.


ಇದನ್ನೂ ಓದಿ-ಈ ಐದು ಅಭ್ಯಾಸಗಳನ್ನು ಅಳವಡಿಸಿಕೊಂಡರೆ ದೇಹದಲ್ಲಿ ಕೊಲೆಸ್ಟ್ರಾಲ್ ಹೆಚ್ಚುವುದೇ ಇಲ್ಲ

ಚಿಯಾ ಬೀಜಗಳು
ತೂಕವನ್ನು ಕಡಿಮೆ ಮಾಡಲು ಚಿಯಾ ಬೀಜಗಳು ಅತ್ಯಂತ ಪರಿಣಾಮಕಾರಿ ಸಾಬೀತಾಗಿವೆ. ಏಕೆಂದರೆ ಇದು ನಿಮ್ಮ ಹಸಿವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇವುಗಳನ್ನು ಸೇವಿಸುವುದರಿಂದ ದೀರ್ಘಕಾಲವರೆಗೆ ನಿಮಗೆ ಹಸಿವಿನ ಅನುಭವ  ಉಂಟಾಗುವುದಿಲ್ಲ.


ಇದನ್ನೂ ಓದಿ-Health Tips: ಮೂತ್ರಪಿಂಡದ ಆರೋಗ್ಯ ರಕ್ಷಣೆಗೆ ಇಲ್ಲಿವೆ ಮೂರು ಹೆಲ್ದಿ ಲೆಮನ್ ಡ್ರಿಂಕ್ಸ್


(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆಯನ್ನು ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ) 


ಇದನ್ನೂ ನೋಡಿ-


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.