)
foods avoid in rainy season: ಮಳೆಗಾಲದ ಸಮಯದಲ್ಲಿ ರೋಗನಿರೋಧಕ ಶಕ್ತಿಯು ದುರ್ಬಲಗೊಳ್ಳುತ್ತದೆ ಮತ್ತು ಸೋಂಕಿನ ಅಪಾಯ ಹೆಚ್ಚಾಗುತ್ತದೆ. ಮಳೆಗಾಲದಲ್ಲಿ ಕೆಲವು ಆಹಾರಗಳ ಸೇವನೆ ಮಾಡುವುದು ಒಳ್ಳೆಯದಲ್ಲ. ಮಳೆಗಾಲದಲ್ಲಿ ತಿನ್ನಬಾರದ ಆಹಾರಗಳ ಬಗ್ಗೆ ತಿಳಿಯೋಣ....
ಮಾನ್ಸೂನ್ ಅಂದರೆ ಮಳೆಗಾಲ ಅನೇಕ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಮಳೆಗಾಲದಲ್ಲಿ ವಾತಾವರಣದಲ್ಲಿನ ತೇವಾಂಶವು ನಮ್ಮ ದೇಹವನ್ನು ಅನೇಕ ಸೋಂಕುಗಳು ಮತ್ತು ಕಾಯಿಲೆಗಳಿಗೆ ಹೆಚ್ಚು ಸಂವೇದನಾಶೀಲಗೊಳಿಸುತ್ತದೆ. ಮಳೆಗಾಲವು ಒಂದು ಬದಿಯಲ್ಲಿ ತಂಪಾದ ಮತ್ತು ತಾಜಾತನದ ಖುಷಿ ತರುತ್ತದೆ. ಅದೇ ಸಮಯದಲ್ಲಿ, ತೇವಾಂಶ, ಕೊಳಕು ಮತ್ತು ಬದಲಾಗುತ್ತಿರುವ ತಾಪಮಾನವು ದೇಹದ ಪ್ರತಿರಕ್ಷೆಯನ್ನು ದುರ್ಬಲಗೊಳಿಸುತ್ತದೆ. ಇದು ಶೀತ, ವೈರಲ್ ಜ್ವರ, ಹೊಟ್ಟೆಯ ಸೋಂಕು, ಫುಡ್ ಪಾಯಿಸನಿಂಗ್ ಮತ್ತು ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಹವಾಮಾನಕ್ಕೆ ಅನುಗುಣವಾಗಿ ಆಹಾರ ಸೇವನೆ ಮಾಡುವುದು ಸಹ ಬಹಳ ಮುಖ್ಯ.
ಸೀಸನಲ್ ಹಣ್ಣುಗಳನ್ನು ಸೇವಿಸಿ :
ಸೀಸನಲ್ ಹಣ್ಣುಗಳು ಜೀವಸತ್ವಗಳು ಮತ್ತು ಖನಿಜಗಳಲ್ಲಿ ಸಮೃದ್ಧವಾಗಿವೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅವುಗಳನ್ನು ನಿಮ್ಮ ಮಾನ್ಸೂನ್ ಆಹಾರದಲ್ಲಿ ಸೇರಿಸಬೇಕು. ಮಾನ್ಸೂನ್ ಸಮಯದಲ್ಲಿ, ಆಪಲ್, ಪಿಯರ್, ದಾಳಿಂಬೆ, ಲಿಚಿ ಮತ್ತು ಬಾಳೆಹಣ್ಣಿನಂತಹ ಹಣ್ಣುಗಳನ್ನು ಸೇವಿಸಿ. ಅವು ಕಡಿಮೆ ನೀರಿನಂಶ ಹೊಂದಿರುತ್ತವೆ. ಆದ್ದರಿಂದ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಮಸಾಲೆಯುಕ್ತ ಆಹಾರವನ್ನು ತಪ್ಪಿಸಿ:
ಮಸಾಲೆಯುಕ್ತ ಆಹಾರವು ಜೀರ್ಣಕಾರಿ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಮಳೆಗಾಲದಲ್ಲಿ ಸಾಮಾನ್ಯವಾಗಿ ಜೀರ್ಣಕ್ರಿಯೆಯ ಸಮಸ್ಯೆಗಳು ಉಂಟಾಗುತ್ತಿರುತ್ತವೆ. ಆರ್ದ್ರತೆಯು ದೇಹದ ಜೀರ್ಣಕಾರಿ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ. ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಆಸಿಡಿಟಿ, ಅಜೀರ್ಣತೆ ಮತ್ತು ಹೊಟ್ಟೆಯ ಅಸ್ವಸ್ಥತೆ ಉಂಟಾಗುತ್ತದೆ. ನಿಮ್ಮ ಹೊಟ್ಟೆಯನ್ನು ಶಾಂತವಾಗಿಡಲು ಸುಲಭವಾಗಿ ಜೀರ್ಣವಾಗುವ, ಕಡಿಮೆ ಸ್ಪೈಸಿ ಆಹಾರವನ್ನು ಸೇವಿಸುವುದು ಉತ್ತಮ.
ಎಣ್ಣೆಯಲ್ಲಿ ಕರಿದ ಆಹಾರವನ್ನು ಹೆಚ್ಚು ಸೇವಿಸಬೇಡಿ:
ಮಳೆಗಾಲದಲ್ಲಿ ಎಣ್ಣೆಯಲ್ಲಿ ಕರಿದ ಆಹಾರಗಳ ಸೇವನೆ ಬಾಯಿಗೆ ರುಚಿ ನೀಡುತ್ತದೆ. ಆದರೆ ಅವು ಜೀರ್ಣಕ್ರಿಯೆಯ ಮೇಲೂ ಪರಿಣಾಮ ಬೀರುತ್ತವೆ. ಎಣ್ಣೆಯಲ್ಲಿ ಕರಿದ ಆಹಾರಗಳಲ್ಲಿ ಹೆಚ್ಚಿನ ಪ್ರಮಾಣದ ಕೊಬ್ಬು ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ.
ಅತಿಯಾದ ಉಪ್ಪು ಸೇವನೆ ಬೇಡ :
ಅತಿಯಾದ ಉಪ್ಪು ಸೇವನೆ ದೇಹದಲ್ಲಿ ನೀರಿನ ಕೊರತೆಗೆ ಕಾರಣವಾಗಬಹುದು. ಇದು ಆರ್ದ್ರತೆಯ ವಾತಾವರಣದಲ್ಲಿ ಜೀರ್ಣಕ್ರಿಯೆ ಮೇಲೆ ಕೆಟ್ಟ ಪರಿಣಾಮ ಬೀರುವುದು. ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳು ಹೆಚ್ಚಾಗುತ್ತವೆ. ಮಾನ್ಸೂನ್ ಆಹಾರದ ಭಾಗವಾಗಿ ಉಪ್ಪು ಸೇವನೆಯನ್ನು ಕಡಿಮೆ ಮಾಡುವುದು ಒಳ್ಳೆಯದು.
ಬೆಲ್ಲ ಸೇವನೆಯನ್ನು ಹೆಚ್ಚಿಸಿ :
ಬೆಲ್ಲದಲ್ಲಿ ಇರುವ ಉತ್ಕರ್ಷಣ ನಿರೋಧಕಗಳು ದೇಹವನ್ನು ನಿರ್ವಿಷಗೊಳಿಸುತ್ತವೆ. ರಕ್ತವನ್ನು ಸ್ವಚ್ಛ ಗೊಳಿಸಲು ಸಹಾಯ ಮಾಡುತ್ತದೆ. ಮಳೆಗಾಲದಲ್ಲಿ ಬೆಲ್ಲದ ಜೊತೆ ಮಖಾನಾ ಸೇವನೆಯು ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. Z Kannada News ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.