Special bus system for Hubli : ಈ ತಿಂಗಳ ಮಾರ್ಚ್ 8 ರಂದು ಮಹಾ ಶಿವರಾತ್ರಿ ಹಬ್ಬ ಹಾಗೂ ಸಾಲು ಸಾಲು ಸಾರ್ವಜನಿಕ ರಜೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಾರಿ ಮಾರ್ಚ್ 8 ರಂದು ಶುಕ್ರವಾರ ಮಹಾ ಶಿವರಾತ್ರಿ, ಮಾರ್ಚ್ 9 ರಂದು ಎರಡನೇ ಶನಿವಾರ ಹಾಗೂ ಮಾರ್ಚ್ 10 ರಂದು ಭಾನುವಾರ ಹೀಗೆ ಸಾಲು ಸಾಲು ಸಾರ್ವಜನಿಕ ರಜೆಗಳು ಬಂದಿದ್ದು, ಈ ಅವಧಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರ ಓಡಾಟ ನಿರೀಕ್ಷಿಸಲಾಗಿದೆ. ಅವರ ಅನುಕೂಲಕ್ಕಾಗಿ ಮಾರ್ಚ್ 7 ರಿಂದ ಮಾರ್ಚ್ 11ರ ವರೆಗೆ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. 


ಇದನ್ನು ಓದಿ : Krishi Thapanda :  'ಆಫ್ರಿಕಾದಲ್ಲಿ ಕ್ರಿಷಿ' ಸೀರೆಯಲ್ಲಿ ಕ್ಯಾಮೆರಾ ಹಿಡಿದು ನಿಂತ ಬೆಡಗಿ : ಫೋಟೋಸ್ ಇಲ್ಲಿವೆ 


ಸರ್ಕಾರಿ, ಖಾಸಗಿ ಉದ್ಯೋಗಿಗಳು, ಇತರೆ ಕಾರ್ಯ ನಿಮಿತ್ಯ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪರ ಊರುಗಳಲ್ಲಿ ನೆಲೆಸಿರುವ ಹಲವರು ಶಿವರಾತ್ರಿ ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಮಾರ್ಚ್ 7 ರ ಗುರುವಾರ ಹಾಗೂ ಮಾರ್ಚ್ 8 ಶುಕ್ರವಾರ ಬೆಂಗಳೂರು, ಪುಣೆ, ಗೋವಾ ಮತ್ತಿತರ ಪ್ರಮುಖ ಸ್ಥಳಗಳಿಂದ ಹುಬ್ಬಳ್ಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.


ಮಾರ್ಚ್ 7 ರಿಂದ ಮಾರ್ಚ್ 11ರ ವರೆಗೆ ಈ ಅವಧಿಯಲ್ಲಿ ಜಿಲ್ಲೆಯೊಳಗೆ ವಿವಿಧ ಸ್ಥಳಗಳು ಹಾಗೂ ಅಕ್ಕಪಕ್ಕದ ಜಿಲ್ಲೆಗಳ ನಡುವೆಯೂ ಸಹ ಪ್ರಯಾಣಿಕರ ಹೆಚ್ಚಳಕ್ಕೆ ತಕ್ಕಂತೆ ಹೆಚ್ಚುವರಿ ಬಸ್ಸುಗಳನ್ನು ಬಿಡಲಾಗುತ್ತದೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ.


ಇದನ್ನು ಓದಿ : Indian Horticultural Research Institute : ಬೆಂಗಳೂರಿನ ಹೆಸರಘಟ್ಟದಲ್ಲಿ ಮಾರ್ಚ್ 5 ರಿಂದ ತೋಟಗಾರಿಕಾ ಮೇಳ 2024


ಅದೇ ರೀತಿ ರಜೆ ಮುಗಿಸಿ ತಮ್ಮ ಕಾರ್ಯ ಕ್ಷೇತ್ರಗಳಿಗೆ ಹಿಂದಿರುಗುವವರ ಅನುಕೂಲಕ್ಕಾಗಿ ಮಾರ್ಚ್ 10ರ ಭಾನುವಾರ ಹಾಗೂ ಮಾರ್ಚ್ 11 ರಂದು ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರು, ಪುಣೆ, ಗೋವಾ, ಮಂಗಳೂರು, ವಿಜಯಪುರ, ಬಾಗಲಕೋಟೆ ಮತ್ತಿತರ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.