)
ಧಾರವಾಡ: ರೈತರಿಂದ ಸಾಲ ವಸೂಲಾತಿಯಲ್ಲಿ ಬ್ಯಾಂಕ್ಗಳು ಮಾನವೀಯತೆಯನ್ನು ಕಾಯ್ದುಕೊಳ್ಳಬೇಕು ಮತ್ತು ಸಾಲ ಮರುಪಾವತಿಗೆ ಸಾಕಷ್ಟು ಕಾಲಾವಕಾಶ ನೀಡಬೇಕು ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಬ್ಯಾಂಕ್ಗಳಿಗೆ ಸೂಚಿಸಿದ್ದಾರೆ.
"ಸಾಲ ವಸೂಲಿಗಿಂತ ಜನರ ಜೀವ ಮುಖ್ಯವಾಗಿದೆ," ಎಂದು ಒತ್ತಿ ಹೇಳಿರುವ ಅವರು, ಸರ್ಕಾರದಿಂದ ಬರುವ ಪಿಂಚಣಿ, ಪರಿಹಾರ ಧನ, ಅಥವಾ ಇತರ ಆರ್ಥಿಕ ಸೌಲಭ್ಯಗಳನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡಿದರೆ, ಸಂಬಂಧಪಟ್ಟ ಬ್ಯಾಂಕ್ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಜುಲೈ 14 ರಂದು ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ರೈತ ಆತ್ಮಹತ್ಯೆ ಪ್ರಕರಣಗಳು ಮತ್ತು ಕೃಷಿ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತ ಸಭೆಯಲ್ಲಿ ಮಾತನಾಡಿದ ಸಚಿವ ಲಾಡ್, ರೈತರ ಆತ್ಮಹತ್ಯೆಯ ಕಾರಣಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಲು ಕೃಷಿ ವಿಶ್ವವಿದ್ಯಾಲಯ, ಕಂದಾಯ, ಕೃಷಿ ಇಲಾಖೆ, ಬ್ಯಾಂಕ್ ಅಧಿಕಾರಿಗಳು, ಮತ್ತು ಸಾಮಾಜಿಕ ತಜ್ಞರನ್ನು ಒಳಗೊಂಡ ಸಮಿತಿ ರಚಿಸಲಾಗುವುದು ಎಂದು ತಿಳಿಸಿದರು. ರೈತರ ಆರ್ಥಿಕ ಸ್ಥಿತಿ ಮತ್ತು ಉದ್ಯೋಗದ ಬಗ್ಗೆ ತಿಳಿದುಕೊಂಡು, ಬ್ಯಾಂಕ್ಗಳು ಸಾಲ ಮರುಪಾವತಿಗೆ ಸೂಕ್ತ ಕಾಲಾವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ರೈತ ಆತ್ಮಹತ್ಯೆ:
ಜಿಲ್ಲೆಯಲ್ಲಿ 50,000 ಎನ್ಪಿಎ ಖಾತೆಗಳು ಧಾರವಾಡ ಜಿಲ್ಲೆಯಲ್ಲಿ ಸುಮಾರು 50,000 ಬ್ಯಾಂಕ್ ಖಾತೆಗಳು ಕಾರ್ಯನಿರ್ವಹಿಸದ (ಎನ್ಪಿಎ) ಸ್ಥಿತಿಯಲ್ಲಿವೆ. ಇವುಗಳನ್ನು ಎ, ಬಿ, ಸಿ ವರ್ಗಗಳಾಗಿ ವಿಂಗಡಿಸಿ, ತೀವ್ರ ಆರ್ಥಿಕ ಸಂಕಷ್ಟದಲ್ಲಿರುವವರನ್ನು ಗುರುತಿಸಿ, ಅವರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸೌಲಭ್ಯಗಳು ತಲುಪುವಂತೆ ಮಾಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. 2020-21ರಿಂದ 2025ರ ಜುಲೈವರೆಗೆ ಜಿಲ್ಲೆಯಲ್ಲಿ 284 ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ, ಇವುಗಳಲ್ಲಿ ನಿಯಮಾನುಸಾರ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಸರ್ಕಾರಿ ಸೌಲಭ್ಯಗಳ ಹೊಂದಾಣಿಕೆಗೆ ಕಾನೂನು ಅವಕಾಶವಿಲ್ಲ ಸರ್ಕಾರದಿಂದ ರೈತರಿಗೆ ಸಿಗುವ ಬೆಳೆ ವಿಮೆ, ಪಿಂಚಣಿ, ಅಥವಾ ಇತರ ಆರ್ಥಿಕ ಸೌಲಭ್ಯಗಳನ್ನು ಸಾಲದ ಖಾತೆಗೆ ಹೊಂದಾಣಿಕೆ ಮಾಡುವುದಕ್ಕೆ ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ಸಚಿವ ಲಾಡ್ ಸ್ಪಷ್ಟಪಡಿಸಿದರು. ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಕಾನೂನಾತ್ಮಕ ಕ್ರಮಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು. ಕುಂದಗೋಳ ಶಾಸಕ ಎಂ.ಆರ್. ಪಾಟೀಲ್, ಬ್ಯಾಂಕ್ ಸಿಬ್ಬಂದಿಗಳು ರೈತರ ಮನೆಗಳಿಗೆ ಭೇಟಿ ನೀಡಿ ಅನಗತ್ಯ ಒತ್ತಡ ಹೇರುತ್ತಿರುವುದರ ಬಗ್ಗೆ ದೂರುಗಳು ಬಂದಿರುವುದಾಗಿ ತಿಳಿಸಿದರು.
ಕೃಷಿ ಇಲಾಖೆಗೆ ಸಕಾಲದ ಸೌಲಭ್ಯ ಒದಗಿಸಲು ಸೂಚನೆ ರೈತರ ಏಳಿಗೆಯೇ ಸರ್ಕಾರದ ಗುರಿಯಾಗಿದ್ದು, ಸಕಾಲದಲ್ಲಿ ಬೀಜ, ಗೊಬ್ಬರ, ಮತ್ತು ಕೃಷಿ ಉಪಕರಣಗಳು ಲಭ್ಯವಾಗುವಂತೆ ಕೃಷಿ ಇಲಾಖೆ ಖಾತ್ರಿಪಡಿಸಬೇಕು ಎಂದು ಸಚಿವರು ಹೇಳಿದರು. ಬೆಳೆ ವಿಮೆಯ ಲಾಭ ಎಲ್ಲ ಅರ್ಹ ರೈತರಿಗೂ ತಲುಪಬೇಕು, ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಎಂ. ಬ್ಯಾಕೋಡ್, ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.