ಲವ್ ಜಿಹಾದ್: ಮಹಿಳೆಯರಿಗೆ ಹೆಲ್ಪ್ ಲೈನ್ ಮೂಲಕ ಸಹಾಯಕ್ಕೆ ಮುಂದಾದ ಶ್ರೀರಾಮ ಸೇನೆ
Helpline Number: ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿನ ಖಾಸಗಿ ಹೊಟೇಲ್ ನಲ್ಲಿ ಮೂರು ಸಾವಿರಮಠದ ಶ್ರೀ ಗುರುಸಿದ್ಧರಾಜೇಯೋಗಿಂದ್ರ ಮಹಾಸ್ವಾಮಿಗಳಿಂದ ಸಹಾಯವಾಣಿ ಸಂಖ್ಯೆಯನ್ನು ಲೋಕಾರ್ಪಣೆ ಮಾಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
Sri Ramasena: ಲವ್ ಜಿಹಾದ್ (Love Jihad) ವಿರುದ್ಧ ಸಮರ ಸಾರಿರುವ ಶ್ರೀ ರಾಮಸೇನೆ ಹಿಂದೂ ಹೆಣ್ಣು ಮಕ್ಕಳ ರಕ್ಷಣೆಗಾಗಿ ಹೆಲ್ಪ್ ಲೈನ್ (Helpline For Girl Child Protection) ಆರಂಭಿಸಿದೆ. ಶ್ರೀ ರಾಮಸೇನೆಯಿಂದ ಹೆಣ್ಣು ಮಕ್ಕಳ ರಕ್ಷಣೆಗಾಗಿ ರಾಜ್ಯದ ಆರು ಕಡೆಗಳಲ್ಲಿ ಸಹಾಯವಾಣಿ ಸಂಖ್ಯೆಯನ್ನು ಲೋಕಾರ್ಪಣೆ ಮಾಡಲಾಗಿದೆ.
ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿನ ಖಾಸಗಿ ಹೊಟೇಲ್ ನಲ್ಲಿ ಮೂರು ಸಾವಿರಮಠದ ಶ್ರೀ ಗುರುಸಿದ್ಧರಾಜೇಯೋಗಿಂದ್ರ ಮಹಾಸ್ವಾಮಿಗಳಿಂದ ಸಹಾಯವಾಣಿ ಸಂಖ್ಯೆಯನ್ನು ಲೋಕಾರ್ಪಣೆ ಮಾಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ
ಪ್ರಮೋದ್ ಮುತಾಲಿಕ್ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
ಇದನ್ನೂ ಓದಿ- ತಾಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Sri Ramsena Pramod Muthalik), ಹಿಂದು ಮಹಿಳೆಯರಿಯರಿಗೆ ಹಾಗೂ ಯುವತಿಯರಿಗೆ ಯಾವುದೇ ರೀತಿಯ ತೊಂದರೆ ಆದರೆ 24 ಗಂಟೆ ಒಳಗೆ ಪೊಲೀಸರು ಹಾಗೂ ವಿವಿಧ ಇಲಾಖೆಗಳ ಸಹಾಯದಿಂದ ನ್ಯಾಯ ಕೊಡಿಸುವ ಭರವಸೆಯನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
ಪ್ರೀತಿ ಹೆಸರಿನಲ್ಲಿ ಲವ್ ಜಿಹಾದ್ (Love Jihad) ಹಿಂದು ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ಕಡಿಮೆ ಮಾಡಲು ಇದೊಂದು ಕ್ರಾಂತಿಕಾರಿ ಹೆಜ್ಜೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.
ಇದನ್ನೂ ಓದಿ- ಇದನ್ನ ಸಾಮಾನ್ಯ ವ್ಯಕ್ತಿ ಹೇಳಿದ್ದರೆ ವೈದ್ಯರ ಬಳಿ ಒಯ್ಯುತ್ತಿದ್ರು
ಸಹಾಯವಾಣಿ ಸಂಖ್ಯೆ:
9090443444 ಹೆಣ್ಣು ಮಕ್ಕಳ ರಕ್ಷಣೆಗಾಗಿ (Protection of Girl Child) ಆರಂಭಿಸಲಾಗಿರುವ ಸಹಾಯವಾಣಿ ಆಗಿದ್ದು ಯಾರಿಗೂ ಹೆದರದೇ ದಿನದ 24 ಗಂಟೆಯೂ ಸಹಾಯಕ್ಕಾಗಿ ಕಾಲ್ ಮಾಡಬಹುದು ಎಂದವರು ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.