ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಷಡ್ಯಂತ್ರ - ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿರುವ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದರು. 

Written by - Yashaswini V | Last Updated : Mar 15, 2024, 02:33 PM IST
  • ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಯಸ್ಸು ಮತ್ತು ಅವರ ವರ್ಚಸ್ಸಿಗೆ ಗೌರವ ಕೊಡಬೇಕು.
  • ಅವರ ಹೆಸರಿಗೆ ಮಸಿ ಬಳೆಯುವ ಉದ್ದೇಶದಿಂದ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.
  • ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಬಿಎಸ್ ವೈ ಶುದ್ಧರಾಗಿ ಹೊರ ಬರ್ತಾರೆ - ಪ್ರಹ್ಲಾದ್ ಜೋಷಿ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಷಡ್ಯಂತ್ರ - ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ  title=

POCSO Case Former CM BS Yediyurappa: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಷಡ್ಯಂತ್ರ ರಚಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು.

ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಯಸ್ಸು ಮತ್ತು ಅವರ ವರ್ಚಸ್ಸಿಗೆ ಗೌರವ ಕೊಡಬೇಕು. ಅವರ ಹೆಸರಿಗೆ ಮಸಿ ಬಳೆಯುವ ಉದ್ದೇಶದಿಂದ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಬಿಎಸ್ ವೈ ಶುದ್ಧರಾಗಿ ಹೊರ ಬರ್ತಾರೆ ಎಂದರು.

ಇದನ್ನೂ ಓದಿ- BS Yediyurappa: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಿಎಂ ಬಿಎಸ್’ವೈ ವಿರುದ್ಧ FIR

ಪ್ರಧಾನಿ ಮೋದಿ ಅವರಿಗೆ ಬೆಂಬಲ ನೀಡಲು ಯುವಪಡೆ ಸನ್ನದ್ಧವಾಗಿದೆ. ಅದಕ್ಕೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ 'ದೇಶಕ್ಕಾಗಿ ನನ್ನ ಮತ' ಅಭಿಯಾನ ಚುರುಕುಗೊಳಿಸಲಾಗುತ್ತಿದೆ. 

ಶೇ. 90ರಷ್ಟು ಹೊಸ ಮತದಾರರು ಪ್ರಧಾನಿ ಮೋದಿ ಅವರ ಪರವಾಗಿದ್ದಾರೆ. ಯುವಕರು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯಿಂದ ಪ್ರಭಾವಿತರಾಗಿದ್ದಾರೆ. ಹೀಗಾಗಿ ಬಿಜೆಪಿ ಕಳೆದ ಬಾರಿಗಿಂದ ಹೆಚ್ಚು ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ ಎಂದರು.

ಇದನ್ನೂ ಓದಿ- ಹುಬ್ಬಳ್ಳಿ-ಧಾರವಾಡದಲ್ಲಿ ಯಡಿಯೂರಪ್ಪನವರು ನನ್ನ ಮಾರ್ಜಿನ್ ಹೆಚ್ಚಿಸಿದ್ದಾರೆ: ಪ್ರಹ್ಲಾದ ಜೋಶಿ

ಜಗದೀಶ ಶೆಟ್ಟರ ಅವರಿಗೆ ಬೆಳಗಾವಿ ಟಿಕೆಟ್ ವಿಚಾರವಾಗಿ ಮಾತನಾಡಿದ ಅವರು, ಜಗದೀಶ ಶೆಟ್ಟರ ಅವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಸಿಕ್ಕರೆ ನಮಗೆ ಅತ್ಯಂತ ಖುಷಿ ಎಂದು ಹೇಳಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News