ಬ್ಯಾಂಕ್ ಆಫ್ ಮಹಾರಾಷ್ಟ್ರ ಕಚೇರಿ ಮೇಲ್ಛಾವಣಿ ಕುಸಿತ; ಓರ್ವ ಸಾವು, 10 ಮಂದಿಗೆ ಗಾಯ
ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದೆಹಲಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿರುವ ಬ್ಯಾಂಕ್ ಆಫ್ ಮಹಾರಾಷ್ಟ್ರ ಕಚೇರಿಯ ಮೇಲ್ಛಾವಣಿ ಕುಸಿದಿದ್ದು, ಹಲಾವು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಮೂಲಗಳ ಪ್ರಕಾರ, ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ 20 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವರೆಗೆ 12 ಮಂದಿಯನ್ನು ರಕ್ಷಿಸಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಮತ್ತಷ್ಟು ಜನರ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.