ಜಮ್ಮು-ಕಾಶ್ಮೀರ: ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಲ್ಲಿ 10 ದಿನದ ಶಿಶು ಮೃತ!

ಪೂಂಚ್ ಜಿಲ್ಲೆಯ ಕೃಷ್ಣ ಕಣಿವೆ, ಮೆಂದರ್ ಮತ್ತು ಮಂಕೋಟ್ ವಲಯದಲ್ಲಿ ಪ್ರಚೋದನೆಯಿಲ್ಲದೆ ಗುಂಡು ಹಾರಿಸುವ ಮೂಲಕ ಪಾಕಿಸ್ತಾನವು ಭಾರತೀಯ ಚೆಕ್‌ಪೋಸ್ಟ್‌ಗಳು ಮತ್ತು ವಸತಿ ಪ್ರದೇಶಗಳನ್ನು ಗುರಿಯಾಗಿಸಿದೆ. ಗುಂಡಿನ ಚಕಮಕಿಯಲ್ಲಿ ಒಂದು ಮಗು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

Last Updated : Jul 29, 2019, 09:22 AM IST
ಜಮ್ಮು-ಕಾಶ್ಮೀರ: ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆಯಲ್ಲಿ 10 ದಿನದ ಶಿಶು ಮೃತ! title=
File Image

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ (ಎಲ್‌ಒಸಿ) ಪಕ್ಕದ ಪ್ರದೇಶವೊಂದರಲ್ಲಿ ಪಾಕಿಸ್ತಾನ ಮತ್ತೆ ಭಾರತದ ಗಡಿಯಲ್ಲಿರುವ ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಕಳೆದ ರಾತ್ರಿ, ಪಾಕಿಸ್ತಾನದಿಂದ ನಡೆದ ಈ ಗುಂಡಿನ ದಾಳಿಯಲ್ಲಿ 10 ದಿನ ಶಿಶು ಸಾವನ್ನಪ್ಪಿದೆ. ಈ ದಾಳಿಯಲ್ಲಿ ಗಾಯಗೊಂಡ ಇತರ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪೂಂಚ್ ಜಿಲ್ಲೆಯ ಕೃಷ್ಣ ಕಣಿವೆ, ಮೆಂದರ್ ಮತ್ತು ಮಂಕೋಟ್ ವಲಯದಲ್ಲಿ ಪ್ರಚೋದನೆಯಿಲ್ಲದೆ ಗುಂಡು ಹಾರಿಸುವ ಮೂಲಕ ಪಾಕಿಸ್ತಾನವು ಭಾರತೀಯ ಚೆಕ್‌ಪೋಸ್ಟ್‌ಗಳು ಮತ್ತು ವಸತಿ ಪ್ರದೇಶಗಳನ್ನು ಗುರಿಯಾಗಿಸಿದೆ. ಈ ಸಂದರ್ಭದಲ್ಲಿ 10 ದಿನದ ಮಗು ಸೇರಿದಂತೆ ಮೂವರು ಗಾಯಗೊಂಡಿದ್ದರು.

 ಗಾಯಗೊಂಡವರನ್ನು ಕೂಡಲೇ ಪೂಂಚ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ದಾಳಿಯಲ್ಲಿ ಗಾಯಗೊಂಡ ಇಬ್ಬರನ್ನು ಜಮ್ಮುವಿಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Trending News