ಗುವಾಹಟಿಯಲ್ಲಿ ಗ್ರೆನೇಡ್ ದಾಳಿ: 10 ಮಂದಿಗೆ ಗಂಭೀರ ಗಾಯ

ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ. 

Updated: May 16, 2019 , 09:37 AM IST
ಗುವಾಹಟಿಯಲ್ಲಿ ಗ್ರೆನೇಡ್ ದಾಳಿ: 10 ಮಂದಿಗೆ ಗಂಭೀರ ಗಾಯ

ಗುವಾಹಾಟಿ: ಅಸ್ಸಾಂನ ಗುವಾಹಟಿಯ ಆರ್.ಜಿ.ಬರುಹಾ ರಸ್ತೆಯಲ್ಲಿರುವ ಸೆಂಟರ್ ಶಾಪಿಂಗ್ ಮಾಲ್ ಎದುರು ಬುಧವಾರ ಸಂಜೆ ನಡೆದ ಗ್ರೆನೇಡ್ ಸ್ಪೋಟದಲ್ಲಿ ಇಬ್ಬರು ಎಸ್ಎಸ್ಬಿ ಸೈನಿಕರು ಸೇರಿ 10 ಮಂದಿ ಗಂಭೀರ ಗಾಯಗೊಂಡಿದ್ದಾರೆ.

ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ. ಸೆಂಟರ್ ಮಾಲ್ ಎದುರಿನ ಪೋಲಿಸ್ ಚೆಕ್ ಪೋಸ್ಟ್ ನಿಂದ ಕೇವಲ 20 ಅಡಿ ದೂರದಲ್ಲಿ ಘಟನೆ ನಡೆದಿದ್ದು, ಗಾಯಾಳುಗಳನ್ನು ಗುವಾಹಟಿ ಮೆಡಿಕಲ್ ಕಾಲೇಜು ಆಸ್ಪತ್ರೆ ಸೇರಿದಂತೆ ನಗರ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದೀಪಕ್ ಕುಮಾರ್ ತಿಳಿಸಿದ್ದಾರೆ. 

ಗಾಯಗೊಂಡ SSB ಯೋಧರನ್ನು ರಮೇಶ್ ಲಾಲ್ ಮತ್ತು ಅಮುಲ್ಯ ಲಾಲ್ ಎಂದು ಗುರುತಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ. ಆರೋಪಿಗಳನ್ನು ಶೀಘ್ರದಲ್ಲಿಯೇ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ನಗರಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.