ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಆಗ್ತಾರಾ ಪ್ರಿಯಾಂಕಾ ಗಾಂಧಿ..? ಇಲ್ಲಿದೆ ಮೆಗಾ ಪ್ಲಾನ್
ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸುಮಾರು 10 ಲಕ್ಷ ಕ್ಯಾಲೆಂಡರ್‌ಗಳನ್ನು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿ ಗ್ರಾಮ ಮತ್ತು ನಗರಗಳಲ್ಲಿ ವಿತರಿಸಲಿದೆ.
ನವದೆಹಲಿ: ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಸುಮಾರು 10 ಲಕ್ಷ ಕ್ಯಾಲೆಂಡರ್‌ಗಳನ್ನು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಪ್ರತಿ ಗ್ರಾಮ ಮತ್ತು ನಗರಗಳಲ್ಲಿ ವಿತರಿಸಲಿದೆ.
12 ಪುಟಗಳ ಟೇಬಲ್-ಟಾಪ್ ಕ್ಯಾಲೆಂಡರ್‌ನಲ್ಲಿ ಪ್ರತಿ ಪುಟದಲ್ಲಿ ಪ್ರಿಯಾಂಕಾ ಗಾಂಧಿ (Priyanka Gandhi Vadra) ಯವರ ಛಾಯಾಚಿತ್ರವಿದ್ದು, ಅವರು ಸಕ್ರಿಯ ರಾಜಕಾರಣಕ್ಕೆ ಧುಮುಕಿದಾಗಿನಿಂದ ಅವರ ಪ್ರಯಾಣವನ್ನು ಮತ್ತು ಅವರ ವಿವಿಧ ಮನಸ್ಥಿತಿ ಮತ್ತು ಸಹಾನುಭೂತಿಯ ಚಿತ್ರಣವನ್ನು ಈ ಕಾಲೆಂಡರ್ ಪ್ರತಿಬಿಂಬಿಸುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಉತ್ತರ ಪ್ರದೇಶದ ಸೋನ್‌ಭದ್ರದಲ್ಲಿ 3,350 ಟನ್ ಸಂಗ್ರಹದ ಚಿನ್ನದ ನಿಕ್ಷೇಪ ಪತ್ತೆ
ಉತ್ತರ ಪ್ರದೇಶದಲ್ಲಿ ಸೆಕ್ಷನ್ 144 ಜಾರಿ, 15 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆ ಸ್ಥಗಿತ
ಪಕ್ಷದ ಮೂಲಗಳ ಪ್ರಕಾರ ಉತ್ತರ ಪ್ರದೇಶ (Uttar Pradesh) ದ ವಿವಿಧ ಭಾಗಗಳಲ್ಲಿ ಕ್ಯಾಲೆಂಡರ್ ಕಳುಹಿಸಲಾಗುವುದು ಮತ್ತು ಪ್ರಿಯಾಂಕಾ ಅವರ ನೇತೃತ್ವದಲ್ಲಿ 2022 ರಲ್ಲಿ ನಡೆಯಲಿರುವ ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷವನ್ನು ಉತ್ತೇಜಿಸಲು ಈ ಕಾರ್ಯಕ್ಕೆ ಮುಂದಾಗಿದೆ ಎನ್ನಲಾಗಿದೆ.ಮೂಲಗಳ ಪ್ರಕಾರ ಮುಂಬರುವ ಉತ್ತರ ಪ್ರದೇಶದ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ನಿಟ್ಟಿನಲ್ಲಿ ಈ ಪ್ರಯತ್ನ ಮಾಡಲಾಗುತ್ತಿದೆ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.