ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್‌ನ 10 ಶಾಸಕರು ಬಿಜೆಪಿಗೆ ಸೇರ್ಪಡೆ

ರಾಷ್ಟ್ರ ರಾಜಧಾನಿ ನವದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರ ಸಮ್ಮುಖದಲ್ಲಿ ಎಸ್‌ಡಿಎಫ್ ಶಾಸಕರು ಬಿಜೆಪಿಗೆ ಸೇರ್ಪಡೆಯಾದರು.

Updated: Aug 13, 2019 , 05:08 PM IST
ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್‌ನ 10 ಶಾಸಕರು ಬಿಜೆಪಿಗೆ ಸೇರ್ಪಡೆ

ನವದೆಹಲಿ: ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್(ಎಸ್‌ಡಿಎಫ್) ಪಕ್ಷದ 10 ಶಾಸಕರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾದರು. 

ರಾಷ್ಟ್ರ ರಾಜಧಾನಿ ನವದೆಹಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರ ಸಮ್ಮುಖದಲ್ಲಿ ಎಸ್‌ಡಿಎಫ್ ಶಾಸಕರು ಬಿಜೆಪಿಗೆ ಸೇರ್ಪಡೆಯಾದರು.

ಎಸ್‌ಡಿಎಫ್ ಶಾಸಕರ ಸೇರ್ಪಡೆಯ ಬೆಳವಣಿಗೆ ಬಿಜೆಪಿಗೆ ಉತ್ತೇಜನಕಾರಿಯಾಗಿದೆಯಾದರೂ ಇದರಿಂದ ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಮ್ಲಿಂಗ್‌ಗೆ ಭಾರೀ ಹಿನ್ನಡೆಯಾದಂತಾಗಿದೆ. ಹೀಗಾಗಿ ಎಸ್‌ಡಿಎಫ್‌ನಲ್ಲಿ ಚಾಮ್ಲಿಂಗ್ ಸೇರಿದಂತೆ ಕೇವಲ ಐದು ಶಾಸಕರು ಉಳಿದಿದ್ದಾರೆ.

ಹಿಮಾಲಯನ್ ರಾಜ್ಯದಲ್ಲಿ ಬಿಜೆಪಿ ತನ್ನದೇ ಆದ ಅಸ್ತಿತ್ವ ಸಾಧಿಸುತ್ತಿರುವುದು ಇದೇ ಮೊದಲು. ಪ್ರಸ್ತುತ, ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟದ (ನೆಡಾ) ಒಂದು ಘಟಕವಾಗಿರುವ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ(ಎಸ್‌ಕೆಎಂ) ಸಿಕ್ಕಿಂನಲ್ಲಿ ಅಧಿಕಾರದಲ್ಲಿದೆ.

ಕಳೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಸ್‌ಕೆಎಂ 32 ವಿಧಾನಸಭಾ ಸ್ಥಾನಗಳಲ್ಲಿ 17 ಸ್ಥಾನಗಳನ್ನು ಗೆಲ್ಲುವ ಮೂಲಕ 15 ಸ್ಥಾನಗಳನ್ನು ಗಳಿಸಿದ ಎಸ್‌ಡಿಎಫ್‌ನಿಂದ ಅಧಿಕಾರವನ್ನು ಕಸಿದುಕೊಂಡಿದೆ.