ಛತ್ತೀಸ್‌ಗಢದ ದಾಂತೇವಾಡದಲ್ಲಿ ನಕ್ಸಲರ ದಾಳಿಗೆ 10 ಪೊಲೀಸರ ಬಲಿ

ಛತ್ತೀಸ್‌ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ 10 ಪೊಲೀಸ್ ಸಿಬ್ಬಂದಿ ಮತ್ತು ಚಾಲಕ ಬುಧವಾರ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಕ್ಸಲೀಯರ ವಿರುದ್ಧದ ಕಾರ್ಯಾಚರಣೆ ಮುಗಿಸಿ ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ತಂಡ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

Written by - Zee Kannada News Desk | Last Updated : Apr 26, 2023, 04:29 PM IST
  • ನಾವೆಲ್ಲರೂ ರಾಜ್ಯದ ಜನತೆ ಅವರಿಗೆ ನಮನಗಳನ್ನು ಸಲ್ಲಿಸುತ್ತೇವೆ.
  • ಅವರ ಕುಟುಂಬದವರ ದುಃಖದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ.
  • ಅವರ ಆತ್ಮಕ್ಕೆ ಶಾಂತಿ ಸಿಗಲಿ
ಛತ್ತೀಸ್‌ಗಢದ ದಾಂತೇವಾಡದಲ್ಲಿ ನಕ್ಸಲರ ದಾಳಿಗೆ 10 ಪೊಲೀಸರ ಬಲಿ title=
ಸಾಂದರ್ಭಿಕ ಚಿತ್ರ

ದಾಂತೇವಾಡ: ಛತ್ತೀಸ್‌ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ ಐಇಡಿ ಸ್ಫೋಟದಲ್ಲಿ 10 ಪೊಲೀಸ್ ಸಿಬ್ಬಂದಿ ಮತ್ತು ಚಾಲಕ ಬುಧವಾರ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಕ್ಸಲೀಯರ ವಿರುದ್ಧದ ಕಾರ್ಯಾಚರಣೆ ಮುಗಿಸಿ ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ತಂಡ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ.

ಅಧಿಕಾರಿಗಳ ಪ್ರಕಾರ, ಅರನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ನಕ್ಸಲೀಯ ವಿರೋಧಿ ಕಾರ್ಯಾಚರಣೆಗಾಗಿ ಡಿಆರ್ಜಿ ತಂಡವನ್ನು ದಂತೇವಾಡದಿಂದ ಕಳುಹಿಸಲಾಗಿದೆ. ಕಾರ್ಯಾಚರಣೆ ಮುಗಿಸಿ ತಂಡ ವಾಪಸಾಗುತ್ತಿದ್ದಾಗ ಸ್ಫೋಟ ಸಂಭವಿಸಿದೆ.ಜಿಲ್ಲಾ ರಿಸರ್ವ್ ಗಾರ್ಡ್ ಈ ಪ್ರದೇಶದಲ್ಲಿ ಎಡಪಂಥೀಯ ಉಗ್ರವಾದವನ್ನು ಎದುರಿಸಲು ರಚಿಸಲಾದ ಛತ್ತೀಸ್‌ಗಢ ಪೊಲೀಸರ ಘಟಕಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Praveen Nettaru: ನಾಳೆ ಪ್ರವೀಣ್ ನೆಟ್ಟಾರು ಕನಸಿನ ಮನೆಯ ಗೃಹಪ್ರವೇಶ

“ದಂತೇವಾಡದ ಅರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾವೋವಾದಿ ಕೇಡರ್ ಇರುವ ಮಾಹಿತಿ ಮೇರೆಗೆ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಆಗಮಿಸಿದ್ದ ಡಿಆರ್‌ಜಿ ಪಡೆಯ ಮೇಲೆ ಐಇಡಿ ಸ್ಫೋಟದಿಂದಾಗಿ ನಮ್ಮ 10 ಡಿಆರ್‌ಜಿ ಜವಾನರು ಮತ್ತು ಚಾಲಕ ಹುತಾತ್ಮರಾದ ಸುದ್ದಿ ತುಂಬಾ ದುಃಖಕರವಾಗಿದೆ.ನಾವೆಲ್ಲರೂ ರಾಜ್ಯದ ಜನತೆ ಅವರಿಗೆ ನಮನಗಳನ್ನು ಸಲ್ಲಿಸುತ್ತೇವೆ. ಅವರ ಕುಟುಂಬದವರ ದುಃಖದಲ್ಲಿ ನಾವೆಲ್ಲರೂ ಭಾಗಿಯಾಗಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ."ಎಂದು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: Karnataka Election 2023 : ಜಗಳೂರಿನಲ್ಲಿ ಬಾದ್ ಶಾ ಸುದೀಪ್ ಭರ್ಜರಿ ರೋಡ್ ಶೋ, ಬಿಜೆಪಿ ಪರ ಮತಬೇಟೆ

ದಾಳಿಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಾಘೇಲ್ ಅವರೊಂದಿಗೆ ಮಾತನಾಡಿದ್ದು ಮತ್ತು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ಅವರಿಗೆ ಭರವಸೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News