ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಮೆಲ್ವರ್ಗಗಳನ್ನು ಓಲೈಸುವ ನಿಟ್ಟಿನಲ್ಲಿ ನೀಡಿರುವ ಶೇ 10 ರಷ್ಟು ಮೀಸಲಾತಿಯ ಬಗ್ಗೆ ಪ್ರತಿಕ್ರಿಯಿಸಿರುವ ಹಣಕಾಸು ಸಚಿವ ಅರುಣ್ ಜೈಟ್ಲಿ ಮೇಲ್ಜಾತಿ ಬಡವರಿಗೆ ನೀಡಿರುವ ಶೇ 10 ರಷ್ಟು ಮೀಸಲಾತಿ ಸಂವಿಧಾನದ ಮೂಲ ರಚನೆಯಲ್ಲಿನ ಅಂಶಗಳನ್ನು ಉಲ್ಲಂಘಿಸುವುದಿಲ್ಲ ಎಂದು ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈಗ ತಮ್ಮ ಫೆಸ್ಬೂಕ್  ಬ್ಲಾಗ್ ನಲ್ಲಿ  ಶೇ10 ರಷ್ಟು ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಅರುಣ್ ಜೈಟ್ಲಿ ಆರ್ಥಿಕ ಹಿಂದುಳಿದಿರುವಿಕೆ ಆಧಾರದ ಮೇಲೆ ಮೇಲ್ವರ್ಗದ ಬಡವರಿಗೆ ನೀಡಿರುವ ಮೀಸಲಾತಿಯೂ ಯಾವುದೇ ರೀತಿಯಿಂದಲೂ ಸಂವಿಧಾನದ  ಮೂಲರಚನೆಯನ್ನು ಉಲ್ಲಂಘಿಸುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಈಗ ಹಣಕಾಸು ಸಚಿವ ಜೈಟ್ಲಿ ಅವರ ಹೇಳಿಕೆ ಪ್ರಮುಖವಾಗಿ ಸಂವಿಧಾನದ ಮೂಲ ರಚನೆಯನ್ನು ಸರ್ಕಾರದ ಈ ನಡೆ ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ ಈ ಹಿನ್ನಲೆಯಲ್ಲಿ ಈ ಹೇಳಿಕೆ ಬಂದಿದೆ.


ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10 ರಷ್ಟು ಮೀಸಲಾತಿ ನೀಡುವ ನಿಟ್ಟಿನಲ್ಲಿ ಸರ್ಕಾರ ಮಸೂದೆಯೊಂದನ್ನು ಸಂಸತ್ತಿನ ಉಭಯ ಸದನದಲ್ಲಿ ಮಂಡಿಸಿತ್ತು, ಇದಕ್ಕೆ ಎರಡು ಸದನಗಳಲ್ಲಿಯೂ ಕೂಡ ಬಹುಮತ ಸಿಕ್ಕಿತ್ತು. ಅಲ್ಲದೇ ಈಗ ಸರ್ಕಾರದ ಈ ನಡೆಯನ್ನು ಪ್ರಶ್ನಿಸಿ ಸುಪ್ರಿಂಕೋರ್ಟ್ ನಲ್ಲಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.