Tractor Accident: ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿ 11 ಮಂದಿ ದುರ್ಮರಣ..!

ಮಧ್ಯಪ್ರದೇಶದ ಪಾಂಡೋಖರ್‌ ಮೂಲದ 30ಕ್ಕೂ ಹೆಚ್ಚು ಮಂದಿ ಭಕ್ತರು ಟ್ರ್ಯಾಕ್ಟರ್‌ನಲ್ಲಿ ಮಾತಾ ಚಿರುನಾ ದೇವಸ್ಥಾನ(Mata Chirouna Temple)ಕ್ಕೆ ಹೋಗುತ್ತಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶಿವಹರಿ ಮೀನಾ ತಿಳಿಸಿದ್ದಾರೆ.

Written by - Zee Kannada News Desk | Last Updated : Oct 16, 2021, 07:33 AM IST
  • ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ
  • ರಸ್ತೆ ಮಧ್ಯಕ್ಕೆ ಅಡ್ಡಬಂದ ಪ್ರಾಣಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ದುರ್ಘಟನೆ
  • ದೇವರ ದರ್ಶನಕ್ಕೆಂದು 30 ಮಂದಿ ಭಕ್ತರು ಟ್ರ್ಯಾಕ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು
Tractor Accident: ಟ್ರ್ಯಾಕ್ಟರ್ ಪಲ್ಟಿಯಾಗಿ ನಾಲ್ವರು ಮಕ್ಕಳು ಸೇರಿ 11 ಮಂದಿ ದುರ್ಮರಣ..! title=
ಟ್ರ್ಯಾಕ್ಟರ್ ಪಲ್ಟಿಯಾಗಿ 11 ಮಂದಿ ಸಾವು

ಝಾನ್ಸಿ: ಟ್ರ್ಯಾಕ್ಟರ್ ಟ್ರಾಲಿಯೊಂದು ಪಲ್ಟಿ(Tractor Accident) ಹೊಡೆದು ನಾಲ್ವರು ಮಕ್ಕಳು ಸೇರಿ 11 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶ(Uttar Pradesh)ದ ಝಾನ್ಸಿಯಲ್ಲಿ ನಡೆದಿದೆ. ರಸ್ತೆಯ ಮಧ್ಯಕ್ಕೆ ಅಡ್ಡ ಬಂದ ಪ್ರಾಣಿಯೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಟ್ರ್ಯಾಕ್ಟರ್ ಚಾಲಕ ಇದ್ದಕ್ಕಿದ್ದಂತೆಯೇ ಬ್ರೇಕ್ ತುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಚಿರ್ಗಾಂವ್(Chirgaon) ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯ ವಿಷಯ ತಿಳಿದ ಉತ್ತರಪ್ರದೇಶ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.

ಇದನ್ನೂ ಓದಿ: ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೆರೆ ಹಿಡಿದ ಹುಲಿಗೆ ಮೈಸೂರಿನಲ್ಲಿ ಆರೈಕೆ

ಮಧ್ಯಪ್ರದೇಶದ ಪಾಂಡೋಖರ್‌(Pandokhar's in Madhya Pradesh)ಮೂಲದ 30ಕ್ಕೂ ಹೆಚ್ಚು ಮಂದಿ ಭಕ್ತರು ಟ್ರ್ಯಾಕ್ಟರ್‌ನಲ್ಲಿ ಮಾತಾ ಚಿರುನಾ ದೇವಸ್ಥಾನ(Mata Chirouna Temple)ಕ್ಕೆ ಹೋಗುತ್ತಿದ್ದರು ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶಿವಹರಿ ಮೀನಾ ತಿಳಿಸಿದ್ದಾರೆ. ರಸ್ತೆಯ ಮಧ್ಯಭಾಗಕ್ಕೆ ಅಡ್ಡಾದಿಡ್ಡಿಯಾಗಿ ಬಂದ ಪ್ರಾಣಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದ ಚಾಲಕನು ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ. ಪರಿಣಾಮ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದೆ ಅಂತಾ ಸುದ್ದಿಸಂಸ್ಥೆ ANIಗೆ ಅವರು ಮಾಹಿತಿ ನೀಡಿದ್ದಾರೆ.

ಈ ಘಟನೆಯಲ್ಲಿ ನಾಲ್ವರು ಮಕ್ಕಳು ಮತ್ತು 7 ಮಹಿಳೆಯರು ಸಾವನ್ನಪ್ಪಿದ್ದಾರೆ. 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: Post Office ಈ ಯೋಜನೆಗಳಲ್ಲಿ ಒಮ್ಮೆ ಹೂಡಿಕೆ ಮಾಡಿ ; ಇದರಿಂದ ಪ್ರತಿ ತಿಂಗಳು ಹಣ ಗಳಿಸಿಬಹುದು!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News