ಇಂದೋರ್ನಲ್ಲಿ ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು 11 ಜನರು ಸಾವು
ಮಧ್ಯಪ್ರದೇಶದ ಇಂದೋರ್‌ನ ಬಾಲೇಶ್ವರ ಮಹಾದೇವ ದೇವಸ್ಥಾನದ ಆವರಣದಲ್ಲಿ ಗುರುವಾರದಂದು ಮೆಟ್ಟಿಲುಬಾವಿ ಕುಸಿದು 10 ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಇದುವರೆಗೆ 19 ಜನರನ್ನು ರಕ್ಷಿಸಲಾಗಿದೆ ಮತ್ತು ಬಾವಿಯಲ್ಲಿ ಸಿಲುಕಿರುವ ಇತರ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ನವದೆಹಲಿ: ಮಧ್ಯಪ್ರದೇಶದ ಇಂದೋರ್‌ನ ಬಾಲೇಶ್ವರ ಮಹಾದೇವ ದೇವಸ್ಥಾನದ ಆವರಣದಲ್ಲಿ ಗುರುವಾರದಂದು ಮೆಟ್ಟಿಲುಬಾವಿ ಕುಸಿದು 10 ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ಇದುವರೆಗೆ 19 ಜನರನ್ನು ರಕ್ಷಿಸಲಾಗಿದೆ ಮತ್ತು ಬಾವಿಯಲ್ಲಿ ಸಿಲುಕಿರುವ ಇತರ ಜನರನ್ನು ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ : ಮೃತನ ತಾಯಿಗೆ ಈಜುಕೊಳ್ಳದ ಮಾಲೀಕರು ಮತ್ತು ವಿಮಾ ಕಂಪನಿಯಿಂದ ಪರಿಹಾರ ಕೊಡಲು ಆಯೋಗದ ಆದೇಶ
ಬಾವಿ ಇರುವ ಜಾಗ ಕಿರಿದಾಗಿದ್ದು, ರಕ್ಷಣಾ ಕಾರ್ಯಾಚರಣೆ ವೇಳೆ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ವರದಿಗಳ ಪ್ರಕಾರ, ಕುಸಿದ ಬಾವಿಯು ಕನಿಷ್ಠ 50-60 ಅಡಿ ಆಳವಿದ್ದು, ನೀರಿನಿಂದ ತುಂಬಿತ್ತು.ರಾಮನವಮಿಯಂದು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು ನೂರಾರು ಜನರು ಜಮಾಯಿಸಿದಾಗ ಈ ಘಟನೆ ಸಂಭವಿಸಿದೆ.ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ದುರ್ಘಟನೆಯಿಂದ ಅತ್ಯಂತ ನೋವಾಗಿದೆ ಎಂದು ಹೇಳಿದ್ದಾರೆ.
"ಬಿಜೆಪಿಯಲ್ಲಿ ಇದ್ರೆ ಸೇಫ್, ಇಲ್ಲೆ ಇದ್ದು ಗೆದ್ದು ಸಂತಸದಿಂದ ಮಂತ್ರಿಯಾಗೋದು ಒಳ್ಳೆಯದು"-ಯತ್ನಾಳ್
"ಇಂಧೋರ್‌ನಲ್ಲಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ನೋವಾಗಿದೆ. ಸಿಎಂ ಶಿವರಾಜ್ ಚೌಹಾಣ್ ಜಿ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ರಾಜ್ಯ ಸರ್ಕಾರವು ತ್ವರಿತ ಗತಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಮುನ್ನಡೆಸುತ್ತಿದೆ. ಎಲ್ಲಾ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆಗಳು" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.