ನವದೆಹಲಿ: ಸಿಕ್ಕಿಂನ ರಾಜಧಾನಿ ಗ್ಯಾಂಗ್‌ಟಾಕ್‌ನಲ್ಲಿ 29 ವರ್ಷದ ಕ್ಯಾಬ್ ಡ್ರೈವರ್‌ನಿಂದ ಶಾಲೆಯಿಂದ ಹಿಂತಿರುಗುತ್ತಿದ್ದ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ, ಈಗ ಆ ವ್ಯಕ್ತಿ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ಸರ್ಕಾರಿ ನೌಕರರಿಗೆ ಡಬಲ್ ಗುಡ್ ನ್ಯೂಸ್: ಡಿಎ ಹೆಚ್ಚಳದೊಂದಿಗೆ ಈ ದರದಲ್ಲೂ ಏರಿಕೆ


ಬಾಲಕಿ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಆರೋಪಿಯು ಬಾಲಕಿಗೆ ಲಿಫ್ಟ್ ನೀಡಿದ್ದು, ಇದೆ ವೇಳೆ ಆಕೆಗೆ ತಿಂಡಿ ಜೂಸ್ ಖರೀಧಿಸಿ ನಂತರ ಹತ್ತಿರದ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಈಗ ಆರೋಪಿಯ ವಿರುದ್ಧ ಸಿಕ್ಕಿಂ ಪೊಲೀಸರು ಭಾರತೀಯ ದಂಡ ಸಂಹಿತೆಯ ಹಲವು ಸೆಕ್ಷನ್‌ಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿದ್ದಾರೆ.Income Tax Return ಫೈಲ್ ಮಾಡುವ ಭರದಲ್ಲಿ ಹ್ಯಾಕರ್‌ಗಳಿಗೆ ಬಲಿಯಾಗದಿರಿ!


ಇನ್ನೊಂದೆಡೆಗೆ ಬಾಲಕಿ ತಾಯಿಯು ಆರೋಪಿಯನ್ನು ನೇಣಿಗೆರಿಸಬೇಕು ಎಂದು ಆಗ್ರಹಿಸಿದ್ದಾರೆ."ನನ್ನ ಮಗಳು ಜೀವನ್ಮರಣ ಹೋರಾಟ ನಡೆಸಿದ್ದಾಳೆ. ಸಾಯುವ ಮುನ್ನ ಆಕೆಗೆ ಚಿತ್ರಹಿಂಸೆ ನೀಡಲಾಗಿತ್ತು. ಆರೋಪಿಗೂ ಅದೇ ಶಿಕ್ಷೆ ನೀಡಬೇಕು.ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿದರೆ ನಾನು ಆತನಿಗೆ ಅದೇ ರೀತಿ ಹಿಂಸೆ ನೀಡುತ್ತೇನೆ" ಎಂದು ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಪೋಲಿಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.