ಶಿವರಾತ್ರಿಯಂದೇ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ 12 ಚಿರತೆಗಳು..!

ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ ವರ್ಷ ನಮೀಬಿಯಾದಿಂದ 8 ಚಿರತೆಗಳು ಭಾರತಕ್ಕೆ ಬಂದಿದ್ದವು. ಇದೀಗ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚಿರತೆಗಳು ಬಂದಿದ್ದಾವೆ. ಜೋಹಾನ್ಸ್‌ಬರ್ಗ್‌ನಿಂದ ಚಿರತೆಗಳೊಂದಿಗೆ ಹಾರಿದ C-17 ವಿಮಾನವು ಇಂದು ಬೆಳಿಗ್ಗೆ 10 ಗಂಟೆಗೆ ಗ್ವಾಲಿಯರ್ ಏರ್‌ಬೇಸ್‌ನಲ್ಲಿ ಇಳಿಯಿತು. ಅಲ್ಲಿಂದ ಚಿರತೆಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲಾಯಿತು.

Written by - Krishna N K | Last Updated : Feb 18, 2023, 06:06 PM IST
  • ಕಳೆದ ವರ್ಷ ನಮೀಬಿಯಾದಿಂದ 8 ಚಿರತೆಗಳು ಭಾರತಕ್ಕೆ ಬಂದಿದ್ದವು.
  • ಇದೀಗ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚಿರತೆಗಳು ಬಂದಿದ್ದಾವೆ.
  • ಚಿರತೆಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲಾಯಿತು.
ಶಿವರಾತ್ರಿಯಂದೇ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ 12 ಚಿರತೆಗಳು..! title=

ಮಧ್ಯಪ್ರದೇಶ : ಭಾರತದಲ್ಲಿ ಚಿರತೆಗಳ ಸಂಖ್ಯೆ ಹೆಚ್ಚುತ್ತಿದೆ. ಕಳೆದ ವರ್ಷ ನಮೀಬಿಯಾದಿಂದ 8 ಚಿರತೆಗಳು ಭಾರತಕ್ಕೆ ಬಂದಿದ್ದವು. ಇದೀಗ ದಕ್ಷಿಣ ಆಫ್ರಿಕಾದಿಂದ ಮತ್ತೆ 12 ಚಿರತೆಗಳು ಬಂದಿದ್ದಾವೆ. ಜೋಹಾನ್ಸ್‌ಬರ್ಗ್‌ನಿಂದ ಚಿರತೆಗಳೊಂದಿಗೆ ಹಾರಿದ C-17 ವಿಮಾನವು ಇಂದು ಬೆಳಿಗ್ಗೆ 10 ಗಂಟೆಗೆ ಗ್ವಾಲಿಯರ್ ಏರ್‌ಬೇಸ್‌ನಲ್ಲಿ ಇಳಿಯಿತು. ಅಲ್ಲಿಂದ ಚಿರತೆಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಸ್ಥಳಾಂತರಿಸಲಾಯಿತು.

ಶನಿವಾರ ಮಧ್ಯಾಹ್ನ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರು ಕುನೊ ರಾಷ್ಟ್ರೀಯ ಉದ್ಯಾನವನದ ಆವರಣದಲ್ಲಿ ಚಿರತೆಗಳನ್ನು ಬಿಡುಗಡೆ ಮಾಡಿದರು. ಈ ಚಿರತೆಗಳಲ್ಲಿ ಏಳು ಗಂಡು ಮತ್ತು ಐದು ಹೆಣ್ಣುಗಳಿವೆ. "ಮಹಾಶಿವರಾತ್ರಿಯ ಸಂದರ್ಭದಲ್ಲಿ ಮಧ್ಯಪ್ರದೇಶಕ್ಕೆ ಉಡುಗೊರೆ ಸಿಕ್ಕಿದೆ. ಪ್ರಧಾನಿ ಮೋದಿಯವರಿಗೆ ಧನ್ಯವಾದಗಳು" ಎಂದು ಸಿಎಂ ಶಿವರಾಜ್ ಸಿಂಗ್ ಹೇಳಿದ್ದಾರೆ. 

ಇದನ್ನೂ ಓದಿ: Shiva Temple: ಧರ್ಮ ಮೀರಿ ಶಿವ ದೇವಾಲಯ ನಿರ್ಮಿಸಿದ ಕ್ರಿಶ್ಚಿಯನ್ ಅಧಿಕಾರಿ!

ಅಧಿಕಾರಿಗಳು ಈ ಚಿರತೆಗಳಿಗಾಗಿ 10 ಕ್ವಾರಂಟೈನ್ ಆವರಣಗಳನ್ನು ಸಿದ್ಧಪಡಿಸಿದ್ದಾರೆ. ಭಾರತೀಯ ವನ್ಯಜೀವಿ ಕಾನೂನಿನ ಪ್ರಕಾರ, ಇತರ ದೇಶಗಳ ಪ್ರಾಣಿಗಳನ್ನು ಪ್ರತ್ಯೇಕವಾಗಿ ಇಡಬೇಕು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನಮೀಬಿಯಾದಿಂದ ಎಂಟು ಚಿರತೆಗಳನ್ನು ತರಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನದಂದು ಸೆಪ್ಟೆಂಬರ್ 17, 2022 ರಂದು ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಅದನ್ನು ಬಿಡುಗಡೆ ಮಾಡಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News