ಉಜ್ವಲ ಭವಿಷ್ಯಕ್ಕೆ ನ್ಯಾನೋ ತಂತ್ರಜ್ಞಾನ ನಿರ್ಣಾಯಕ: ಬೊಮ್ಮಾಯಿ
12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ` ಸಮಾವೇಶಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.
ಬೆಂಗಳೂರು: ನ್ಯಾನೋ ತಂತ್ರಜ್ಞಾನದ (Nano Technology) ಮೂಲಕ ತಯಾರಿಸಿರುವ ನ್ಯಾನೋ ಯೂರಿಯಾ ರಸಗೊಬ್ಬರವು ಪರೀಕ್ಷಾ ಹಂತದಲ್ಲಿ ಯಶಸ್ವಿಯಾಗಿದ್ದು, ಇದು ಮುಂಬರುವ ದಿನಗಳಲ್ಲಿ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವರ್ಚುವಲ್ ಮಾದರಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ 12 ನೇ ವರ್ಷದ 'ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ'ವನ್ನು ಸೋಮವಾರ ಉದ್ಘಾಟಿಸಿ, ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai), ನ್ಯಾನೋ ಯೂರಿಯಾವನ್ನು ರಾಜ್ಯದ ಎಲ್ಲ ಕೃಷಿ ವಿ.ವಿ.ಗಳಲ್ಲಿ ಈಗಾಗಲೇ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಳ್ಳೆಯ ಫಲಿತಾಂಶ ಬಂದಿದೆ. ಇದು ಮುಂಬರುವ ದಿನಗಳಲ್ಲಿ ಕೃಷಿಕರ ಅವಿಭಾಜ್ಯ ಅಂಗವಾಗಲಿದ್ದು, ನ್ಯಾನೋ ತಂತ್ರಜ್ಞಾನವು ಬದುಕಿನಲ್ಲಿ ಮಹತ್ತರ ಬದಲಾವಣೆಗಳನ್ನು ತರಲಿದೆ ಎಂದರು.
ವಿಜ್ಞಾನ ಮತ್ತು ತಂತ್ರಜ್ಞಾನಗಳ (Technology) ಮೂಲಕ ಜನಜೀವನವನ್ನು ಸುಧಾರಿಸಬೇಕು ಎನ್ನುವುದು ಪ್ರಧಾನಿ ಮೋದಿಯವರ ಕನಸೂ ಆಗಿದೆ ಎಂದು ಸಿಎಂ ಹೇಳಿದರು.
ಇದನ್ನೂ ಓದಿ: Palmistry: ಅಂಗೈಯಲ್ಲಿ ಈ 5 ಚಿಹ್ನೆಗಳಿರುವ ಮಹಿಳೆಯರು ತುಂಬಾ ಲಕ್ಕಿ ಆಗಿರುತ್ತಾರೆ
ಹೀಗಾಗಿ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರವು 'ನ್ಯಾನೋ ತಂತ್ರಜ್ಞಾನದ ತೊಟ್ಟಿಲು' ಕೂಡ ಆಗಬೇಕು. ಇದಕ್ಕೆ ಸರಕಾರವು ಸಂಪೂರ್ಣ ಸಹಕಾರ ನೀಡಲಿದ್ದು, ಅಗತ್ಯ ನೀತಿಗಳನ್ನು ರೂಪಿಸಲಿದೆ ಎಂದು ಭರವಸೆ ನೀಡಿದರು.
ಬೆಂಗಳೂರಿನಲ್ಲಿ (Bangalore) ಸರಕಾರಿ ಮತ್ತು ಖಾಸಗಿ ವಲಯ ಎರಡೂ ಸೇರಿ ವಿಶ್ವದರ್ಜೆಯ 180 ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಗಳಿವೆ. ಇವು ನ್ಯಾನೋ ತಂತ್ರಜ್ಞಾನವನ್ನು ಜನರ ಬಳಿಗೆ ಕೊಂಡೊಯ್ಯಲಿವೆ ಎಂದು ಹೇಳಿದರು.
ಒಂದು ಅಣುವಿನಲ್ಲಿರುವ ಅಗಾಧ ಶಕ್ತಿಯನ್ನು ಮನುಕುಲದ ಒಳಿತಿಗೆ ಹೇಗೆ ಉಪಯೋಗಿಸಿಕೊಳ್ಳಬಹುದು ಎನ್ನುವುದೇ ನ್ಯಾನೋ ತಂತ್ರಜ್ಞಾನದ ವೈಶಿಷ್ಟ್ಯವಾಗಿದೆ. ಹೀಗಾಗಿ ಇದು 'ಸೀಡ್ ತಂತ್ರಜ್ಞಾನ'ವಾಗಿದ್ದು, ಸುಸ್ಥಿರತೆ ಮತ್ತು ಅವಕಾಶ ಎರಡನ್ನೂ ಹೊತ್ತು ತರಲಿದೆ ಎಂದರು.
ಇದನ್ನೂ ಓದಿ: Budh Gochar 2022: ಇಂದಿನಿಂದ ಈ 5 ರಾಶಿಯವರಿಗೆ ಒಳ್ಳೆಯ ದಿನಗಳು ಪ್ರಾರಂಭವಾಗಲಿವೆ
ಸಮಾವೇಶದಲ್ಲಿ ಮಾತನಾಡಿದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Ashwathanarayan), ಸರಕಾರವು ಸದ್ಯದಲ್ಲೇ ಸಮಗ್ರ ನ್ಯಾನೋ ತಂತ್ರಜ್ಞಾನ ನೀತಿಯನ್ನು ಹೊರತರಲಿದೆ. ಈ ಮೂಲಕ ಸಂಶೋಧನಾ ಮತ್ತು ಔದ್ಯಮಿಕ ವಲಯಗಳೆರಡನ್ನೂ ಪರಸ್ಪರ ಹತ್ತಿರಕ್ಕೆ ತರಲಾಗುವುದು. ಇದರಿಂದಾಗಿ, ನ್ಯಾನೋ ತಂತ್ರಜ್ಞಾನದ ಲಾಭವು ಸಮಾಜಕ್ಕೆ ಸಿಗಲಿದೆ ಎಂದರು.
ಈ ಸಮಾವೇಶವು ಬುಧವಾರದವರೆಗೆ ನಡೆಯಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.