ಮಹಾರಾಷ್ಟ್ರದಲ್ಲಿ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 13 ಮಂದಿ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ
ಧುಲೇಯಲ್ಲಿ, ಪಿಕಪ್ ವಾಹನವು ಸೇತುವೆಯಿಂದ ಬಿದ್ದು ನಾಲ್ಕು ಜನರು ಸಾವನ್ನಪ್ಪಿದರು ಮತ್ತು ಕಾರೊಂದು ಪುಣೆ-ಮುಂಬೈ ಎಕ್ಸ್ಪ್ರೆಸ್ನಲ್ಲಿ ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬರು ಸಾವನ್ನಪ್ಪಿದರು ಮತ್ತು ಒಬ್ಬರು ತೀವ್ರ ಗಾಯಗೊಂಡಿದ್ದಾರೆ.
ನವದೆಹಲಿ: ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಶನಿವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಧುಲೇನಲ್ಲಿ ಇಂದು ವಿಂಚೂರ್ ಬಳಿಯ ನದಿಯೊಂದರಲ್ಲಿ ಪಿಕಪ್ ವಾಹನ ಸೇತುವೆಯಿಂದ ಬಿದ್ದು ಏಳು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಏತನ್ಮಧ್ಯೆ, ಶುಕ್ರವಾರ ಮುಂಜಾನೆ ಪುಣೆ-ಮುಂಬೈ ಎಕ್ಸ್‌ಪ್ರೆಸ್ ಹೆದ್ದಾರಿಯ ರಸಾಯಾನಿ ಪಟ್ಟಣದ ಬಳಿ ಪ್ರಯಾಣಿಸುತ್ತಿದ್ದ ಕಾರು ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ತೀವ್ರ ಗಾಯಗೊಂಡಿದ್ದಾರೆ.
ಮುಂಜಾನೆ 4: 45 ಕ್ಕೆ ಸಾಂಗ್ಲಿ ಜಿಲ್ಲೆಯಿಂದ ಬರುತ್ತಿದ್ದ ಕಾರು ಹಿಂದಿನಿಂದ ಗ್ಯಾಸ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಓರ್ವ ಪುರುಷ ಮತ್ತು ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರವಾಗಿ ಗಾಯಗೊಂಡಿದ್ದ ಓರ್ವ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.