ನವದೆಹಲಿ: ನಾಲ್ಕು ಜನರಿಂದ ಅತ್ಯಾಚಾರಕ್ಕೊಳಗಾದ 13 ವರ್ಷದ ಬಾಲಕಿಯು ಪ್ರಕರಣ ದಾಖಲಿಸಲು ಹೋಗಿದ್ದ ಸಂದರ್ಭದಲ್ಲಿ ಲಲಿತ್‌ಪುರದ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮತ್ತೆ ಆಕೆಯ ಮೇಲೆ  ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.


COMMERCIAL BREAK
SCROLL TO CONTINUE READING

ಎಸ್‌ಎಚ್‌ಒ ಸೇರಿದಂತೆ ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.ಎಸ್‌ಎಚ್‌ಒ ಅವರನ್ನು ಅಮಾನತುಗೊಳಿಸಲಾಗಿದ್ದು, ಈಗ ಅವರು ತಲೆ ಮೆರೆಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಘಟನೆಯ ವಿಚಾರವಾಗಿ ಮಾತನಾಡಿದ ಕಾನ್ಪುರ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾನು ಭಾಸ್ಕರ್ ಡಿಐಜಿ ಝಾನ್ಸಿ ಜೋಗೇಂದ್ರ ಕುಮಾರ್ ಅವರು ಪ್ರಕರಣದ ತನಿಖೆ ನಡೆಸಿ 24 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ತಿಳಿಸಿದ್ದಾರೆ.ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


ಇದನ್ನೂ ಓದಿ: ಪ್ರಧಾನಿ ರ್ಯಾಲಿ ಸ್ಥಳದಿಂದ ಸ್ವಲ್ಪ ದೂರದಲ್ಲೇ ಸಂಭವಿಸಿತು ಸ್ಫೋಟ!


'ಎಸ್‌ಎಚ್‌ಒ ಅವರನ್ನು ಅಮಾನತುಗೊಳಿಸಲಾಗಿದ್ದು, ಲಲಿತ್‌ಪುರದ ಪಾಲಿ ಪೊಲೀಸ್ ಠಾಣೆಯ ಎಲ್ಲಾ ಪೊಲೀಸರನ್ನು ಪೊಲೀಸ್ ಲೈನ್‌ಗಳಿಗೆ ಕಳುಹಿಸಲಾಗಿದೆ.ಶೀಘ್ರದಲ್ಲೇ  ತಪ್ಪಿತಸ್ಥ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭಾಸ್ಕರ್ ಹೇಳಿದರು. ಎಫ್‌ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ: 'ಕಿಚ್ಚ ಸುದೀಪ್ ಹೇಳಿದ್ದರಲ್ಲಿ ತಪ್ಪಿಲ್ಲ, ಆದರೆ ಸಂಸ್ಕೃತ ರಾಷ್ಟ್ರ ಭಾಷೆಯಾಗಲಿ'


ಘಟನೆಯ ತನಿಖೆಯ ಜವಾಬ್ದಾರಿಯನ್ನು ವಹಿಸಿರುವ ಡಿಐಜಿಗೆ ಪ್ರಕರಣವು ಇತ್ಯರ್ಥವಾಗುವವರೆಗೆ ಲಲಿತ್‌ಪುರದಲ್ಲಿ ಇರಲು ತಿಳಿಸಲಾಗಿದೆ ಎಂದು ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್, ಹೇಳಿದರು.ಏಪ್ರಿಲ್ 22 ರಂದು ನಾಲ್ವರು ತನ್ನ ಮಗಳನ್ನು ಭೋಪಾಲ್‌ಗೆ ಕರೆದೊಯ್ದು ಮೂರು ದಿನಗಳ ಕಾಲ ಅತ್ಯಾಚಾರವೆಸಗಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.


ಆರೋಪಿಯು ಬಾಲಕಿಯನ್ನು ಪಾಲಿ ಪೊಲೀಸ್ ಠಾಣೆಯಲ್ಲಿ ಬಿಟ್ಟು ಹೋಗಿದ್ದು, ಅಲ್ಲಿ ಎಸ್‌ಎಚ್‌ಒ ಅತ್ಯಾಚಾರವೆಸಗಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.ಬಾಲಕಿ ನಂತರ ಚೈಲ್ಡ್‌ಲೈನ್ ಎನ್‌ಜಿಒವನ್ನು ಸಂಪರ್ಕಿಸಿ ಇಡೀ ಘಟನೆಯನ್ನು ವಿವರಿಸಿದ್ದಾಳೆ ಎನ್ನಲಾಗಿದೆ.ಇದೇ ವೇಳೆ ಎನ್‌ಜಿಒ ಪೊಲೀಸ್ ವರಿಷ್ಠಾಧಿಕಾರಿಯನ್ನು ಸಂಪರ್ಕಿಸಿದ ನಂತರ ಮಂಗಳವಾರದಂದು ಆರೋಪಿಗಳ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಹಿಂದಿ ದಾಷ್ಟ್ಯ ಮೆರೆಯುವ ಬಾಲಿವುಡ್ ಗೆ ರಾಮ್ ಗೋಪಾಲ್ ವರ್ಮಾ ಹಾಕಿದ ಸವಾಲೇನು ಗೊತ್ತೇ? 


'ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ, ಆದರೆ ಎಸ್‌ಎಚ್‌ಒ ಸೇರಿದಂತೆ ಇತರರನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ" ಎಂದು ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಪಾಠಕ್ ಹೇಳಿದ್ದಾರೆ.ಇದೇ ವೇಳೆ ಯೋಗಿ ಸರ್ಕಾರದ ವಿರುದ್ಧ ಕಿಡಿ ಕಾರಿದ ಸಮಾಜವಾದಿ ಪಕ್ಷ ಹೆಣ್ಣು ಮಕ್ಕಳು ಎಲ್ಲಿಗೆ ಹೋಗಬೇಕು, ಯಾರನ್ನ ನಂಬಬೇಕು ಎಂದು ಟೀಕಾ ಪ್ರಹಾರ ನಡೆಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.