ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಬಸ್, 14 ಶಾಲಾ ಮಕ್ಕಳಿಗೆ ಗಾಯ

ಈ ಘಟನೆ ನಡೆದಾಗ ಬಸ್ ಸುಮಾರು 49 ಮಕ್ಕಳೊಂದಿಗೆ ಪಿವ್ಲಿ-ವಡಾ ರಸ್ತೆಯಲ್ಲಿ ಪ್ರಯಾಣಿಸುತ್ತಿತ್ತು ಎನ್ನಲಾಗಿದೆ. 

Updated: Aug 13, 2019 , 03:45 PM IST
ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದ ಬಸ್, 14 ಶಾಲಾ ಮಕ್ಕಳಿಗೆ ಗಾಯ
Photo Courtesy: ANI

ಪಾಲ್ಘರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಾಡಾದಲ್ಲಿ ಮಂಗಳವಾರ ಬೆಳಿಗ್ಗೆ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆದ ಪರಿಣಾಮ 14 ಶಾಲಾ ಮಕ್ಕಳು ಗಾಯಗೊಂಡಿದ್ದಾರೆ.

ಈ ಘಟನೆ ನಡೆದಾಗ ಬಸ್ ಸುಮಾರು 49 ಮಕ್ಕಳೊಂದಿಗೆ ಪಿವ್ಲಿ-ವಡಾ ರಸ್ತೆಯಲ್ಲಿ ಪ್ರಯಾಣಿಸುತ್ತಿತ್ತು ಎನ್ನಲಾಗಿದೆ. ಗಾಯಗೊಂಡ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂಜಾನೆ 6: 30 ರ ಸುಮಾರಿಗೆ ಮಹಿಳೆಯೊಬ್ಬಳು ಬಸ್ ಮುಂದೆ ಇದ್ದಕ್ಕಿದ್ದಂತೆ ಬಂದ ಪರಿಣಾಮ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಉಳಿಸುವ ಪ್ರಯತ್ನದಲ್ಲಿ, ಚಾಲಕನು ನಿಯಂತ್ರಣವನ್ನು ಕಳೆದುಕೊಂಡನು ಮತ್ತು ಬಸ್ ಅಪಘಾತಕ್ಕೆ ಒಳಗಾಗಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎಂದು ಹೇಳಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.