ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿದ್ದು 6 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ.
1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್ ಕುಮಾರ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. 73 ವರ್ಷದ ಸಜ್ಜನ್ ಕುಮಾರ್ ನ್ಯಾಯಾಲಯಕ್ಕೆ ಡಿಸೆಂಬರ್ 31, 2018 ರಂದು ಶರಣಾದರು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾಯಮೂರ್ತಿ ಅಶೋಕ್ ಭೂಷಣ್ ಮತ್ತು ಜಸ್ಟಿಸ್ ಎಸ್.ಕೆ. ಕೌಲ್ ಅವರ ಪೀಠವು ಸೋಮವಾರ ಸಜ್ಜನ್ ಕುಮಾರ್ ಅವರ ಅರ್ಜಿ ವಿಚಾರಣೆ ನಡೆಸಿದರು. ಬಳಿಕ ಸಿಬಿಐಗೆ ನೋಟಿಸ್ ಜಾರಿ ಮಾಡಿದ ನ್ಯಾಯಾಲಯ ಆರು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸೂಚಿಸಿದೆ.
ವಾಸ್ತವವಾಗಿ, ಸಜ್ಜನ್ ಕುಮಾರ್ ದೆಹಲಿ ಹೈಕೋರ್ಟಿನ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮನವಿಯನ್ನು ಸಲ್ಲಿಸಿದ್ದಾರೆ. ಇದರಲ್ಲಿ ಹೈದರಾಬಾದ್ ಸಜ್ಜನ್ ಕುಮಾರ್ ಅವರನ್ನು ಜೀವಾವಧಿ ಶಿಕ್ಷೆಗೆ ಗುರಿಪಡಿಸಿದ್ದು, ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಗೆ ಜೀವಾವಧಿ ಶಿಕ್ಷೆ ನೀಡಿದೆ.
1984ರ ಅಕ್ಟೋಬರ್ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್ ಮೆಂಟ್ ಏರಿಯಾದಲ್ಲಿ ಗಲಭೆ ನಡೆದಿತ್ತು. ಈ ವೇಳೆ ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್ ಮುರಳೀಧರ್ ಹಾಗೂ ನ್ಯಾ. ವಿನೋದ್ ಗೋಯಲ್ ಅವರ ಪೀಠ ಸಜ್ಜನ್ ಕುಮಾರ್ ದೋಷಿ ಎಂದು ತೀರ್ಪು ನೀಡಿ, ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಡಿಸೆಂಬರ್ 31ರೊಳಗೆ ಶರಣಾಗುವಂತೆ ಆದೇಶಿಸಿತ್ತು.