ನವದೆಹಲಿ: 1984 ರ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.


COMMERCIAL BREAK
SCROLL TO CONTINUE READING

ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ನೇತೃತ್ವದ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶವನ್ನು ಹೊರಬಂದಿದೆ.


ಕಳೆದ ವರ್ಷ ಡಿಸೆಂಬರ್ 17 ರಂದು ದೆಹಲಿಯ ರಾಜ್ ನಗರ ಪ್ರದೇಶದಲ್ಲಿ 1984 ರ ಅಕ್ಟೋಬರ್ 31 ರಂದು ಅಂದಿನ ಪ್ರಧಾನಿ ಇಂದಿರಾ ಗಾಂದಿ ಅವರನ್ನು ಸಿಖ್ ಅಂಗರಕ್ಷಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇದಾದ ಬಳಿಕ ದೆಹಲಿಯ ಪಾಲಂ ಕಾಲನಿಯ ರಾಜ್ ನಗರ ದಲ್ಲಿ 1984 ರ ನವೆಂಬರ್ 1 ರಂದು ಐವರು ಸಿಖ್ಖರನ್ನು ಹತ್ಯೆ ಮಾಡಲಾಗಿತ್ತು. ಸಿಖ್ ನರಮೇಧ ಪ್ರಕರಣಕ್ಕೆ ಸಂಬಂದಿಸಿದಂತೆ ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. 


ಸಜ್ಜನ್ ಕುಮಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಎರಡು ವಾರಗಳ ನಂತರ ಸಜ್ಜನ್ ಕುಮಾರ್, ಮಹೇಂದರ್ ಯಾದವ್ ಮತ್ತು ಕಿಶನ್ ಖೋಕರ್ ದೆಹಲಿ ಜಿಲ್ಲಾ ನ್ಯಾಯಾಲಯದಲ್ಲಿ ಶರಣಾದರು.