1984ರ ಸಿಖ್ ವಿರೋಧಿ ದಂಗೆ: ನ್ಯಾಯಾಲಯಕ್ಕೆ ಸಜ್ಜನ್ ಕುಮಾರ್ ಶರಣು

1984ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬಿತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಸೇರಿದಂತೆ ಮೂವರು ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

Last Updated : Dec 31, 2018, 04:50 PM IST
1984ರ ಸಿಖ್ ವಿರೋಧಿ ದಂಗೆ: ನ್ಯಾಯಾಲಯಕ್ಕೆ ಸಜ್ಜನ್ ಕುಮಾರ್ ಶರಣು title=
file photo

ನವದೆಹಲಿ: 1984ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬಿತಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್ ಸೇರಿದಂತೆ ಮೂವರು ಸೋಮವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಅಪರಾಧಿಗಳನ್ನು ದೆಹಲಿ ಪೊಲೀಸರು ತಿಹಾರ್ ಜೈಲಿಗೆ ಕರೆದೊಯ್ದಿದ್ದಾರೆ.

1984ರ ಅಕ್ಟೋಬರ್​ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್ ಮೆಂಟ್​ ಏರಿಯಾದಲ್ಲಿ ಗಲಭೆ ನಡೆದಿತ್ತು. ಈ ವೇಳೆ ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್​​ ಮುರಳೀಧರ್​ ಹಾಗೂ ನ್ಯಾ. ವಿನೋದ್​ ಗೋಯಲ್​​ ಅವರ ಪೀಠ ಡಿಸೆಂಬರ್ 17ರಂದು ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಜತೆಗೆ ಸಜ್ಜನ್ ಕುಮಾರ ಅವರನ್ನು ಡಿಸೆಂಬರ್ 31ರೊಳಗೆ ಶರಣಾಗುವಂತೆ ಕೋರ್ಟ್ ಆದೇಶಿಸಿತ್ತು. ಅದರಂತೆ ಇಂದು ಸಜ್ಜನ್ ಕುಮಾರ್ ಸೇರಿದಂತೆ ಮೂವರು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. 

ಈ ಹಿಂದೆ ಈ ಪ್ರಕರಣದ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯ ಸಜ್ಜನ್ ಕುಮಾರ್ ಅವರನ್ನು ದೋಷಮುಕ್ತಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ದೆಹಲಿ ಹೈಕೋರ್ಟ್ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ಪರಿಗಣಿಸುವುದರೊಂದಿಗೆ ದೆಹಲಿ ಕಂಟೋನ್ಮೆಂಟ್ನ ರಾಜ್ ನಗರ ಪ್ರದೇಶದಲ್ಲಿ ಕುಟುಂಬದ ಐದು ಸದಸ್ಯರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಕಾಂಗ್ರೆಸ್ ಕೌನ್ಸಿಲರ್ ಬಲ್ವಾನ್ ಖೋಖರ್, ನಿವೃತ್ತ ನೌಕಾ ಅಧಿಕಾರಿ ಕ್ಯಾಪ್ಟನ್ ಭಾಗ್ಮಾಲ್, ಗಿರಿಧರಿ ಲಾಲ್ ಅವರನ್ನು ನ್ಯಾಯಾಲಯ ಅಪರಾಧಿ ಎಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. 

Trending News