ಬಾಂದ್ರಾ: ಮನೆಯ ಮೇಲ್ಛಾವಣಿ ಕುಸಿದು ಇಬ್ಬರು ಗಾಯಗೊಂಡಿರುವ ಘಟನೆ ಮುಂಬೈನ ಬಾಂದ್ರಾದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಬಾಂದ್ರಾ ಭಾರತ್ ನಗರ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.



ಮಂಗಳವಾರ ಮುಂಜಾನೆ ಇದ್ದಕ್ಕಿದ್ದಂತೆ ಮನೆಯ ಮೇಲ್ಛಾವಣಿ ಕುಸಿದು 9 ವರ್ಷದ ಬಾಲಕ ಮತ್ತು 21 ವರ್ಷದ ಬಾಲಕಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಎನ್ಐ ತನ್ನ ವರದಿಯಲ್ಲಿ ತಿಳಿಸಿದೆ.