ಉರಿ ಮಾದರಿಯ ದಾಳಿ ಸಂಚು ವಿಫಲ, ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರ ಸದ್ದಡಗಿಸಿದ ಸೇನೆ

Terrorists in Army Camp:  ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಉಗ್ರರು ಉರಿ ಮಾದರಿಯ ದುಷ್ಕೃತ್ಯಕ್ಕೆ ಸಂಚು ರೂಪಿಸಿದ್ದರು.  ಆದರೆ ಉಗ್ರರ ಈ ಷಡ್ಯಂತ್ರವನ್ನು ಭದ್ರತಾ ಪಡೆ ವಿಫಲಗೊಳಿಸಿದೆ. 

Written by - Ranjitha R K | Last Updated : Aug 11, 2022, 09:30 AM IST
  • ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಉಗ್ರರ ಅಟ್ಟಹಾಸ
  • ಸೇನಾ ನೆಲೆಯ ಮೇಲೆ ಭಯೋತ್ಪಾದಕರ ದಾಳಿ
  • ಸೇನೆಯಿಂದ ಪ್ರತಿದಾಳಿ ಉಗ್ರರ ಹತ್ಯೆ
 ಉರಿ ಮಾದರಿಯ ದಾಳಿ ಸಂಚು ವಿಫಲ, ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರ ಸದ್ದಡಗಿಸಿದ ಸೇನೆ  title=
Terrorists in Army Camp

Terrorists in Army Camp : ಜಮ್ಮು ಮತ್ತು ಕಾಶ್ಮೀರದಲ್ಲಿ ದೊಡ್ಡ ಭಯೋತ್ಪಾದಕ ಸಂಚು ವಿಫಲವಾಗಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಪ್ರದೇಶದ ಪರ್ಗಲ್‌ನಲ್ಲಿರುವ ಸೇನಾ ನೆಲೆಯ ಮೇಲೆ ಇಬ್ಬರು ಉಗ್ರರು ದಾಳಿ ನಡೆಸಿದ್ದಾರೆ. ಇದಾದ ಬಳಿಕ ಸೇನೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಅದೇ ವೇಳೆ ಈ ಘಟನೆಯಲ್ಲಿ ಸೇನೆಯ ಮೂವರು ಯೋಧರು ಹುತಾತ್ಮರಾಗಿದ್ದಾರೆ. 

 ದಾಳಿ ನಡೆಸಿದ ಉಗ್ರರು : 
ಮಾಹಿತಿಯ ಪ್ರಕಾರ, ರಜೌರಿಯಿಂದ 25 ಕಿಮೀ ದೂರದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ, ಇಬ್ಬರು ಭಯೋತ್ಪಾದಕರು ಸೇನಾ ನೆಲೆಯ ಮೇಲೆ ದಾಳಿ ನಡೆಸಿದ್ದಾರೆ. ಇಲ್ಲಿಯೂ ಉರಿ ಮಾದರಿಯಲ್ಲಿಯೇ ದುಷ್ಕ್ರತ್ಯ ನಡೆಸಲು ಸಂಚು ರೂಪಿಸಲಾಗಿತ್ತು.  ಉಗ್ರರು ಸೇನಾ ಶಿಬಿರಕ್ಕೆ ನುಗ್ಗಲು ಯತ್ನಿಸುತ್ತಿದ್ದರು. ಆದರೆ ಭದ್ರತಾ ಪಡೆಗಳು ಆ ಷಡ್ಯಂತ್ರವನ್ನು ವಿಫಲಗೊಳಿಸಿದೆ. ಭದ್ರತಾ ಪಡೆಯ ಶೋಧ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಇದನ್ನೂ ಓದಿ : Vaishno Devi: ಮಾತಾ ವೈಷ್ಣೋದೇವಿಯ ಭಕ್ತರಿಗೆ ಗುಡ್ ನ್ಯೂಸ್! ಇಂದಿನಿಂದ ಚಲಿಸಲಿದೆ ಈ ವಿಶೇಷ ರೈಲು

ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತ : 
'ಕೆಲವು ಭಯೋತ್ಪಾದಕರು ಪರ್ಗಲ್‌ನಲ್ಲಿರುವ ಸೇನಾ ಶಿಬಿರದ ಬೇಲಿಯನ್ನು ದಾಟಲು ಪ್ರಯತ್ನಿಸಿದ್ದಾರೆ. ಆದರೆ ನಮ್ಮ ಸೇನೆ ಈ ಸಂದರ್ಭದಲ್ಲಿ ಎನ್ಕೌಂಟರ್ ನಡೆಸಿ, ಉಗ್ರರನ್ನು ಹೊಡೆದುರುಳಿಸಿದ್ದಾರೆ  ಎಂದು ಎಡಿಜಿಪಿ ಮುಖೇಶ್ ಸಿಂಗ್ ತಿಳಿಸಿದ್ದಾರೆ.

ಸೇನಾಧಿಕಾರಿಗೂ ಗಾಯ : 
ಈ ಭಯೋತ್ಪಾದಕರ ದಾಳಿಯಲ್ಲಿ ಗಾಯಗೊಂಡ ಸೇನಾ ಸಿಬ್ಬಂದಿಗಳಲ್ಲಿ ಒಬ್ಬ ಅಧಿಕಾರಿಯೂ ಸೇರಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. 16 ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮಂಜಿಂದರ್ ಸಿಂಗ್ ಸದ್ಯದ ಪರಿಸ್ಥಿತಿಯ ಬಗ್ಗೆ ನಿರಂತರವಾಗಿ ಮೇಲ್ವಿಚಾರಣೆ  ನಡೆಸುತ್ತಿದ್ದಾರೆ. 

ಇದನ್ನೂ ಓದಿ : GAIL Recruitment 2022 : GAIL ನಲ್ಲಿ 282 ಖಾಲಿ ಹುದ್ದೆಗಳಿಗೆ ಅರ್ಜಿ : ವಿವರಗಳಿಗೆ ಇಲ್ಲಿ ಪರಿಶೀಲಿಸಿ 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News