ಒಂದೆಡೆ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನೊಂದೆಡೆ ದೇಶದಲ್ಲಿ ಕೊರೊನಾ ಲಸಿಕೆ ಹಾಕುವ ವಿಚಾರದಲ್ಲಿ ದಾಖಲೆ ಮಾಡಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತ 200 ಕೋಟಿ ಲಸಿಕೆ ಗಡಿ ದಾಟಿದೆ. ಕೋವಿಡ್-19 ವಿರುದ್ಧದ ಪಂದ್ಯದಲ್ಲಿ ಭಾರತ ಅದ್ಭುತ ದ್ವಿಶತಕ ಬಾರಿಸಿದೆ. ಮೊದಲಿನಿಂದಲೂ ಕೇಂದ್ರ ಸರ್ಕಾರ ಲಸಿಕೆ ಬಗ್ಗೆ ಜನರಿಗೆ ಅರಿವು ಮೂಡಿಸುತ್ತಿದೆ. ಇದರ ಪರಿಣಾಮವೇ ಭಾರತ ಈ ಮಹತ್ತರ ಸಾಧನೆ ಮಾಡಿದೆ. 


COMMERCIAL BREAK
SCROLL TO CONTINUE READING

ಇದನ್ನು ಓದಿ: PV Sindhu: ಸಿಂಗಾಪುರ ಓಪನ್‌ ಬ್ಯಾಡ್ಮಿಂಟನ್: ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಪಿವಿ ಸಿಂಧು


ಭಾರತದಲ್ಲಿ ಇನ್ನೂ ಲಸಿಕೆ ಅಭಿಯಾನ ನಡೆಯುತ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದಂದು, ಸರ್ಕಾರವು 18 ರಿಂದ 59 ವರ್ಷ ವಯಸ್ಸಿನ ಜನರಿಗೆ ಉಚಿತ ಬೂಸ್ಟರ್ ಡೋಸ್ ಅನ್ನು ಘೋಷಿಸಿದೆ. ಕಳೆದ ಜುಲೈ 15 ರಿಂದ ಈ ಅಭಿಯಾನ ಆರಂಭವಾಗಿದ್ದು, 75 ದಿನಗಳ ವಿಶೇಷ ಅಭಿಯಾನದಡಿ ಇದನ್ನು ಮಾಡಲಾಗುತ್ತಿದೆ. ಜೊತೆಗೆ ದೇಶದಲ್ಲಿ 12 ವರ್ಷಕ್ಕಿಂತ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತಿದೆ.


ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಭಾರತವು ಕೇವಲ 18 ತಿಂಗಳಲ್ಲಿ ಈ ದಾಖಲೆಯನ್ನು ಮಾಡಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನವು ಜನವರಿ 2021 ರಲ್ಲಿ ಪ್ರಾರಂಭವಾಗಿದೆ. ಇದು ವಿಶ್ವದ ಅತಿ ದೊಡ್ಡ ಲಸಿಕೆ ಅಭಿಯಾನ ಎಂದು ಭಾರತ ಸರ್ಕಾರ ಹೇಳಿಕೊಂಡಿದೆ. ವ್ಯಾಕ್ಸಿನೇಷನ್ ವಿಷಯದಲ್ಲಿ ಚೀನಾ ನಂತರ ಭಾರತ ಎರಡನೇ ಸ್ಥಾನದಲ್ಲಿದೆ. ಈ ದಾಖಲೆಯೊಂದಿಗೆ, ಕೊರೊನಾ ವೈರಸ್ ವಿರುದ್ಧದ ಯುದ್ಧದಲ್ಲಿ ಭಾರತವು ಸುರಕ್ಷಿತ ದೇಶಗಳ ಪಟ್ಟಿಗೆ ಸೇರಿಕೊಂಡಿದೆ.


ಇದನ್ನು ಓದಿ: ವಂಚನೆ ಪ್ರಕರಣ: ಸ್ಯಾಂಡಲ್ ವುಡ್ ಖ್ಯಾತ ನಟಿಯ ಸ್ನೇಹಿತ ಅರೆಸ್ಟ್‌


ಇನ್ನು ದೇಶದಲ್ಲಿ 200 ಕೋಟಿ ಡೋಸ್ ಕೊರೊನಾ ಲಸಿಕೆಯನ್ನು ಪರಿಚಯಿಸಿದ್ದಕ್ಕಾಗಿ ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವಿಯಾ ಅಭಿನಂದಿಸಿದ್ದಾರೆ. ಭಾರತವು ಇಲ್ಲಿಯವರೆಗೆ 2 ಕೋಟಿ ಡೋಸ್‌ ನೀಡಿದ್ದು,ನಮಗೆ ಹೆಮ್ಮೆಯ ವಿಷಯವಾಗಿದೆ. ಈ ಸಾಧನೆಗಾಗಿ ನಾನು ಆರೋಗ್ಯ ಕಾರ್ಯಕರ್ತರು ಮತ್ತು ನಾಗರಿಕರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.