ಶಿಲ್ಲಾಂಗ್: ಇಂದು ಮೇಘಾಲಯದಲ್ಲಿ ವಿಧಾನಸಭಾ ಚುನಾವಣೆಯ ಪ್ರಯುಕ್ತ ಮತದಾನ ಪ್ರಾರಂಭವಾಗಿದ್ದು, ಈಗಾಗಲೇ ಮಧ್ಯಾಹ್ನದ ವೇಳೆಗೆ 21.5 ರಷ್ಟು ಮತದಾನ ಚಲಾವಣೆಯಾಗಿದೆ ಎಂದು ತಿಳಿದುಬಂದಿದೆ.


COMMERCIAL BREAK
SCROLL TO CONTINUE READING

ಮತದಾನ ಪ್ರಕ್ರಿಯೆ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿದ್ದು, 60 ಸ್ಥಾನಗಳಿಗಾಗಿ ನಡೆಯುತ್ತಿರುವ ಚುನಾವಣೆಯಲ್ಲಿ ಸದ್ಯ 59 ಕ್ಷೇತ್ರಗಳಿಗೆ ಮಾತ್ರ ಚುನಾವಣೆ ನಡೆಯುತ್ತಿದೆ. ಈಸ್ಟ್ ಗಾರೋ ಜಿಲ್ಲೆಯ ವಿಲಿಯಂ ನಗರದ  ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ. 


ಇಂದಿನ ಚುನಾವಣೆ 361 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದೆ,ಅದರಲ್ಲಿ 31 ಮಹಿಳೆಯರು 80 ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ರಾಜ್ಯಾದ್ಯಂತ 3025 ಚುನಾವಣಾ ಬೂತಗಳನ್ನು ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.