21 ಪಾಕಿಸ್ತಾನಿ ಹಿಂದೂ ವಲಸಿಗರಿಗೆ ಭಾರತೀಯ ಪೌರತ್ವ!

ಜನವರಿ 8 ರಂದು ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಪೌರತ್ವ ತಿದ್ದುಪಡಿ ಕಾಯ್ದೆ, 2014 ರ ಡಿಸೆಂಬರ್ 31 ರ ಮೊದಲುಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ  ಭಾರತಕ್ಕೆ ಬಂದಿರುವ ಮುಸ್ಲಿಮೇತರರಿಗೆ ಪೌರತ್ವ ನೀಡಲು ಪ್ರಯತ್ನಿಸುತ್ತದೆ.

Last Updated : Nov 28, 2019, 01:04 PM IST
21 ಪಾಕಿಸ್ತಾನಿ ಹಿಂದೂ ವಲಸಿಗರಿಗೆ ಭಾರತೀಯ ಪೌರತ್ವ! title=

ಜೈಪುರ: 21 ಪಾಕಿಸ್ತಾನಿ ಹಿಂದೂ ವಲಸಿಗರಿಗೆ ರಾಜಸ್ಥಾನ ಸರ್ಕಾರ ಬುಧವಾರ ಭಾರತೀಯ ಪೌರತ್ವ(Indian citizenship) ನೀಡಿದೆ. ಜೈಪುರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೌರತ್ವವನ್ನು ಹಸ್ತಾಂತರಿಸಲಾಯಿತು.

ಒಟ್ಟು "1,310 ವಲಸಿಗರಿಗೆ ರಾಜಸ್ಥಾನ ಸರ್ಕಾರ ಮತ್ತು ಜೋಧಪುರ, ಜೈಸಲ್ಮೇರ್ ಮತ್ತು ಜೈಪುರದ ಜಿಲ್ಲಾಧಿಕಾರಿಗಳು ಪೌರತ್ವ ನೀಡಿದ್ದಾರೆ" ಎಂದು ಗೃಹ ವ್ಯವಹಾರಗಳ ಸಚಿವ ನಿತ್ಯಾನಂದ್ ರೈ ಅವರು ಜುಲೈನಲ್ಲಿ ಲೋಕಸಭೆಗೆ ಮಾಹಿತಿ ನೀಡಿದ್ದರು.

ಜನವರಿ 8 ರಂದು ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ ಪೌರತ್ವ ತಿದ್ದುಪಡಿ ಕಾಯ್ದೆ, 2014 ರ ಡಿಸೆಂಬರ್ 31 ರ ಮೊದಲು ಭಾರತಕ್ಕೆ ಬಂದಿರುವ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಮುಸ್ಲಿಮೇತರರಿಗೆ ಪೌರತ್ವ ನೀಡಲು ಪ್ರಯತ್ನಿಸುತ್ತದೆ. ಆದಾಗ್ಯೂ, ಈ ಕಾಯ್ದೆ ರಾಜ್ಯಸಭೆಯಲ್ಲಿ ಇನ್ನೂ ಅಂಗೀಕಾರವಾಗಿಲ್ಲ.

ಆರು ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಕಾನೂನುಬದ್ಧ ವಲಸಿಗರಿಗೆ ನೋಂದಣಿ ಅಥವಾ ನೈಸರ್ಗಿಕೀಕರಣದ ಮೂಲಕ ರಾಜಸ್ಥಾನದ ಮೂರು ಜಿಲ್ಲೆಗಳಾದ ಜೋಧ್‌ಪುರ, ಜೈಸಲ್ಮೇರ್ ಮತ್ತು ಜೈಪುರಕ್ಕೆ ಭಾರತೀಯ ಪೌರತ್ವ ನೀಡುವ ಅಧಿಕಾರವಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಅವುಗಳೆಂದರೆ, ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ಕ್ರಿಶ್ಚಿಯನ್ನರು.

Trending News