ಮೋದಿ ಸರ್ಕಾರದಲ್ಲಿ 262 ಹೊಸ ವೈದ್ಯಕೀಯ ಕಾಲೇಜು, 15 ಏಮ್ಸ್ಗಳ ನಿರ್ಮಾಣ: ಧರ್ಮೇಂದ್ರ ಪ್ರಧಾನ್
ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2014ರಿಂದ ಅಧಿಕಾರಕ್ಕೆ ಬಂದಾಗಿನಿಂದ 263 ಹೊಸ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ 9 ವರ್ಷಗಳ ಮತ್ತು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಾಡಿದ ಕಾರ್ಯಗಳ ಕುರಿತು ಸಂಶೋಧನಾ ಪ್ರಬಂಧವನ್ನು ಇದೇ ವೇಳೆ ಬಿಡುಗಡೆ ಮಾಡಿದರು.
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2014ರಿಂದ ಅಧಿಕಾರಕ್ಕೆ ಬಂದ ಬಳಿಕ 15 ಹೊಸ ಏಮ್ಸ್ ಮತ್ತು 262 ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ದೆಹಲಿ ಬಿಜೆಪಿ ಆಯೋಜಿಸಿದ್ದ ವಿಚಾರ ಸಂಕಿರಣವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಕಳೆದ 9 ವರ್ಷಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳ ಕುರಿತು ಸಂಶೋಧನಾ ಪ್ರಬಂಧವನ್ನು ಬಿಡುಗಡೆ ಮಾಡಿದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದಲ್ಲಿ ಪ್ರತಿ ದಿನವೂ ಶಾಲಾ-ಕಾಲೇಜು ತೆರೆಯಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: Viral Video: ಇಲ್ಲೊಬ್ಬ ಡಿಜಿಟಲ್ ಭಿಕ್ಷುಕ.. ಕೈಯಲ್ಲಿ QR Code ಹಿಡಿದು ಭಿಕ್ಷೆ ಬೇಡುವ ವಿಡಿಯೋ ವೈರಲ್
ಪ್ರಧಾನಿ ಮೋದಿಯವರ ಸರ್ಕಾರದಡಿ 15 ಹೊಸ ಏಮ್ಸ್‌ಗಳನ್ನು ಸಾರ್ವಜನಿಕರಿಗೆ ಸಮರ್ಪಿಸಲಾಗಿದೆ, ಕಾಂಗ್ರೆಸ್ ಸರ್ಕಾರದಲ್ಲಿ ಕೇವಲ 1 ಏಮ್ಸ್ ಅನ್ನು ನಿರ್ಮಿಸಲಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರ ವಾಜಪೇಯಿಯವರ ಆಳ್ವಿಕೆಯಲ್ಲಿ ಒಟ್ಟು 6 ಏಮ್ಸ್ ನಿರ್ಮಿಸಲಾಗಿತ್ತು. ನಂತರ ಮತ್ತೆ ಅಧಿಕಾರಕ್ಕೆ ಬಂದ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರವು 10 ವರ್ಷಗಳ ಕಾಲ ಆಡಳಿತ ನಡೆಸಿದರೂ ಒಂದೂ ಹೊಸ ಏಮ್ಸ್ ಅನ್ನು ನಿರ್ಮಿಸಲಿಲ್ಲ. ಮೋದಿ ಸರ್ಕಾರ ಮಾಡಿದ ಕೆಲಸವನ್ನು ಮೌಲ್ಯಮಾಪನ ಮಾಡುವುದು ಮತ್ತು ಸರ್ಕಾರವು ಕಳೆದ 9 ವರ್ಷಗಳಲ್ಲಿ ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಏನು ಮಾಡಿದೆ ಎಂಬುದನ್ನು ಜನರಿಗೆ ತಿಳಿಸುವುದು ಬಹಳ ಮುಖ್ಯವಾಗಿದೆ’ ಎಂದು ಅವರು ಹೇಳಿದರು.
ಸ್ವಾತಂತ್ರ್ಯದ ನಂತರ 2014ರವರೆಗೆ ಭಾರತದಲ್ಲಿ ಕೇವಲ 380 ವೈದ್ಯಕೀಯ ಕಾಲೇಜುಗಳಿದ್ದವು. ಆದರೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 9 ವರ್ಷಗಳಲ್ಲಿ 263 ಹೊಸ ವೈದ್ಯಕೀಯ ಕಾಲೇಜುಗಳು ಬಂದಿವೆ. ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಹೆಚ್ಚಿಸುವ ಕೆಲಸವನ್ನೂ ಮೋದಿ ಸರ್ಕಾರ ಮಾಡಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಜೋರು ಮಳೆಯಲ್ಲಿ ರಸ್ತೆ ಬದಿ ರೊಮ್ಯಾನ್ಸ್ ಮಾಡಿದ ಕಪಲ್ಸ್; ವಿಡಿಯೋ ವೈರಲ್..!
ದೇಶದಲ್ಲಿ 700 ನವೋದಯ ವಿದ್ಯಾಲಯಗಳನ್ನು ನಿರ್ಮಿಸಿದ್ದೇವೆ ಎಂದು ಕಾಂಗ್ರೆಸ್ ಹೇಳುತ್ತಿದೆ, ಮೋದಿ ಸರ್ಕಾರ ಕೇವಲ 9 ವರ್ಷಗಳಲ್ಲಿ ದೇಶದ ಎಲ್ಲಾ ಬುಡಕಟ್ಟು ಮತ್ತು ಹಿಂದುಳಿದ ಜಿಲ್ಲೆಗಳಲ್ಲಿ '692 ಏಕಲವ್ಯ ಶಾಲೆಗಳನ್ನು' ಮಂಜೂರು ಮಾಡಿದೆ ಎಂದು ಮಾಹಿತಿ ನೀಡಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.