ಉತ್ತರಪ್ರದೇಶದಲ್ಲಿ ಮಿಂಚು ಬಡಿದು 27 ಮಂದಿ ಮೃತ

ಉತ್ತರ ಪ್ರದೇಶದಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗಿದೆ.

Last Updated : May 11, 2020, 12:27 PM IST
ಉತ್ತರಪ್ರದೇಶದಲ್ಲಿ ಮಿಂಚು ಬಡಿದು 27 ಮಂದಿ ಮೃತ title=

ಲಕ್ನೋ: ಉತ್ತರ ಪ್ರದೇಶದಲ್ಲಿ ಭಾನುವಾರ ಅಕಾಲಿಕ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಸುರಿದ ಭಾರೀ ಮಳೆಗೆ ಉತ್ತರ ಪ್ರದೇಶದ ವಿವಿಧ ಸ್ಥಳಗಳಲ್ಲಿ 27 ಜನರು ಸಾವನ್ನಪ್ಪಿದ್ದಾರೆ.

ಈ ವಿಕೋಪದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 4 ಲಕ್ಷ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಲ್ಲಾ ಜಿಲ್ಲೆಗಳ ಡಿಎಂಗಳಿಗೆ ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ ಅಕಾಲಿಕವಾಗಿ ಸುರಿದ ಮಳೆ ಮತ್ತು ಮಿಂಚಿನಿಂದ ಫತೇಪುರ ಮತ್ತು ಬಲ್ಲಿಯಾದಲ್ಲಿ ಹಲವರು ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ನಿಂದ ಟ್ವೀಟ್ ಮಾಡುವ ಮೂಲಕ ತಿಳಿಸಲಾಗಿದೆ. 

ಅಗಲಿದ ಆತ್ಮಗಳಿಗೆ ಶಾಂತಿ ಕೋರಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಮೃತರ ಕುಟುಂಬಗಳಿಗೆ 4-4 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ಜಿಲ್ಲೆಗಳ ಡಿಎಂಗಳಿಗೆ ನಿರ್ದೇಶನ ನೀಡಿದ್ದಾರೆ.
 

Trending News