ಮುಂಬೈ-ಪುಣೆ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರ ದುರ್ಮರಣ, 14 ಮಂದಿಗೆ ಗಾಯ

ಸುಮಾರು 35 ಪ್ರಯಾಣಿಕರನ್ನು ಹೊತ್ತ ಖಾಸಗಿ ಬಸ್ ಮುಂಬೈನಿಂದ ಕೊಲ್ಹಾಪುರಕ್ಕೆ ತೆರಳುತ್ತಿದ್ದಾಗ ಮುಂಜಾನೆ 4 ಗಂಟೆ ಸುಮಾರಿಗೆ ಕಮ್ಶೆಟ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.

PTI | Updated: Oct 21, 2019 , 02:06 PM IST
ಮುಂಬೈ-ಪುಣೆ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರ ದುರ್ಮರಣ, 14 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ಮುಂಬೈ-ಪುಣೆ ಹೆದ್ದಾರಿಯಲ್ಲಿ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. 

ಸುಮಾರು 35 ಪ್ರಯಾಣಿಕರನ್ನು ಹೊತ್ತ ಖಾಸಗಿ ಬಸ್ ಮುಂಬೈನಿಂದ ಕೊಲ್ಹಾಪುರಕ್ಕೆ ತೆರಳುತ್ತಿದ್ದಾಗ ಮುಂಜಾನೆ 4 ಗಂಟೆ ಸುಮಾರಿಗೆ ಕಮ್ಶೆಟ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ಚಾಲಕನು ನಿಯಂತ್ರಣವನ್ನು ಕಳೆದುಕೊಂಡ ಪರಿಣಾಮ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಟ್ರಕ್ ಸಂಪೂರ್ಣ ಜಖಂ ಆಗಿದೆ. ಅಪಘಾತದಲ್ಲಿ ಗಾಯಗೊಂಡು ಅಸುಮಾರು 12 ರಿಂದ 14 ಮಂದಿಯನ್ನು ತಲೇಗಾಂವ್‌ನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಲೋನಾವ್ಲಾ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಕನ್ವಾತ್ ಹೇಳಿದ್ದಾರೆ.