ಮಣಿಪುರದಲ್ಲಿ ಘನಘೋರ ಕೃತ್ಯ : ಸೇನಾ ಸಮವಸ್ತ್ರದಲ್ಲಿ ಬಂದು ಮೂವರ ಮೇಲೆ ಗುಂಡು ಹಾರಿಸಿದ ಉಗ್ರರು !
Manipur Violence Latest Updates: ಸೇನಾ ಸಮವಸ್ತ್ರದಲ್ಲಿ ಬಂದ ಉಗ್ರರು ಶೋಧ ಕಾರ್ಯದ ನೆಪದಲ್ಲಿ ಕೆಲವರನ್ನು ಮನೆಯಿಂದ ಹೊರಗೆ ಕರೆದಿದ್ದರು. ಇದಾದ ಬಳಿಕ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.
Manipur Violence Latest Updates : ಮಣಿಪುರದಲ್ಲಿ ಒಂದು ತಿಂಗಳ ಹಿಂದೆ ಪ್ರಾರಂಭವಾದ ಜನಾಂಗೀಯ ಹಿಂಸಾಚಾರ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಶುಕ್ರವಾರ, ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಸೇನಾ ಸಮವಸ್ತ್ರದಲ್ಲಿ ಬಂದ ಉಗ್ರರು ಶೋಧ ಕಾರ್ಯದ ನೆಪದಲ್ಲಿ ಕೆಲವರನ್ನು ಮನೆಯಿಂದ ಹೊರಗೆ ಕರೆದಿದ್ದರು. ಇದಾದ ಬಳಿಕ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ 3 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಸ್ಥಳಕ್ಕೆ ತಲುಪಿದಾಗ ಉಗ್ರರು ಅಲ್ಲಿಂದ ಪರಾರಿಯಾಗಿದ್ದಾರೆ.
ಮನೆಯಿಂದ ಹೊರ ಕರೆದು ಪರಿಚಯ ಕೇಳಿದ ಉಗ್ರರು :
ಅಧಿಕಾರಿಗಳ ಪ್ರಕಾರ, ಇಂಫಾಲ್ ಪಶ್ಚಿಮ ಜಿಲ್ಲೆಯ ಗಡಿಯಲ್ಲಿರುವ ಖೋಕೆನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾತ್ರಿ ಸೇನಾ ಸಮವಸ್ತ್ರದಲ್ಲಿದ್ದ ಉಗ್ರರು ಶೋಧ ಕಾರ್ಯದ ನೆಪದಲ್ಲಿ ಕೆಲವರನ್ನು ಮನೆಯಿಂದ ಹೊರಗೆ ಕರೆದಿದ್ದಾರೆ. ನಂತರ ಅವರಲ್ಲಿ ಪರಿಚಯ ಕೇಳಿದ್ದಾರೆ. ಇದಾದ ನಂತರ ಅವರ ಮೇಲೆ ಮನಬಂದಂತೆ ಗುಂಡು ಹಾರಿಸಲಾಗಿದೆ. ಗುಂಡಿನ ಸದ್ದು ಕೇಳಿದ ಸೇನೆ, ಅಸ್ಸಾಂ ರೈಫಲ್ಸ್ ಮತ್ತು ಮಣಿಪುರ ಪೊಲೀಸ್ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿದೆ. ಆದರೆ ಅಷ್ಟು ಹೊತ್ತಿಗಾಗಲೇ ಉಗ್ರರು ಶಸ್ತ್ರಾಸ್ತ್ರಗಳೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ.
ಇದನ್ನೂ ಓದಿ : Haryana Politics: ಖಟ್ಟರ್ ಸರ್ಕಾರದಲ್ಲಿ ಅಸಮಾಧಾನದ ಹೊಗೆ, 2024ರ ಮುನ್ನವೇ ಬಿಜೆಪಿ ಕೈಜಾರಲಿದೆಯಾ ಹರ್ಯಾಣಾ?
ಇದುವರೆಗೆ ನಡೆದ ಹಿಂಸಾಚಾರದಲ್ಲಿ 100ಕ್ಕೂ ಹೆಚ್ಚು ಮಂದಿ ಸಾವು :
ಭದ್ರತಾ ಪಡೆಗಳು ಉಗ್ರರನ್ನು ಸೆರೆಹಿಡಿಯಲು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ. ಮೂಲಗಳ ಪ್ರಕಾರ, ಉಗ್ರಗಾಮಿಗಳು ಮೈತೈ ಸಮುದಾಯಕ್ಕೆ ಸೇರಿದವರು ಎನ್ನಲಾಗಿದೆ. ಇತ್ತೀಚಿನ ಹಿಂಸಾಚಾರದಿಂದ ರಾಜ್ಯದಲ್ಲಿ ಸಾವಿನ ಸಂಖ್ಯೆ 100 ರ ಗಡಿ ದಾಟಿದೆ. ಇದುವರೆಗೆ 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾಜ್ಯದಲ್ಲಿ ಹಿಂಸಾಚಾರವನ್ನು ನಿಲ್ಲಿಸಲು ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ಸುಮಾರು 10,000 ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. ಇದರ ಹೊರತಾಗಿ ಹಿಂಸಾಚಾರ ಇನ್ನೂ ಮುಂದುವರಿದಿದೆ.
ಮೇ 3ರಿಂದ ರಾಜ್ಯದಲ್ಲಿ ಜಾತಿ ಹಿಂಸಾಚಾರ :
ಈ ಹಿಂಸಾಚಾರ ಮೇ 3 ರಂದು ಪ್ರಾರಂಭವಾಯಿತು. ಕುಕಿ ಮತ್ತು ನಾಗಾ ಜನರು ಮೇಟಿ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನದ ಬೇಡಿಕೆಯ ವಿರುದ್ಧ ಗುಡ್ಡಗಾಡು ಪ್ರದೇಶಗಳಲ್ಲಿ ಮೆರವಣಿಗೆ ನಡೆಸಿದರು. ಆ ಸಮಯದಲ್ಲಿ ಅನೇಕ ಮನೆಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಈ ಹಿನ್ನೆಲೆಯಲ್ಲಿ ಅನೇಕ ಮಂದಿ ಮೃತಪಟ್ಟಿದ್ದಾರೆ. ಹಿಂಸಾಚಾರದಲ್ಲಿ ಮೈತೆ ಮತ್ತು ಕುಕಿ ಎರಡೂ ಜನಾಂಗಕ್ಕೆ ಸೇರಿದವರು ಮೃತಪಟ್ಟಿದ್ದಾರೆ. ಆದರೆ ಮೈತೈ ಸಮುದಾಯದವರು ಆರ್ಥಿಕ ನಷ್ಟವನ್ನು ಅನುಭವಿಸಬೇಕಾಯಿತು. ಈ ಮೆರವಣಿಗೆಯ ನಂತರ, ರಾಜ್ಯದಾದ್ಯಂತ ಕುಕಿ ಮತ್ತು ಮೈತೈ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದಿತು.
ಇದನ್ನೂ ಓದಿ : Maharashtra Politics: ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೆ ಬಿರುಗಾಳಿಯ ಸಂಕೇತ, ರಾಜೀನಾಮೆಗೆ ಮುಂದಾದ ಸಿಎಂ ಪುತ್ರ ಶ್ರೀಕಾಂತ್ ಸಿಂಧೆ!
ಗೃಹ ಸಚಿವರ ಸೂಚನೆ ಮೇರೆಗೆ ಹಿಂಸಾಚಾರದ ಕುರಿತು ಸಿಬಿಐ ತನಿಖೆ :
ರಾಜ್ಯದಲ್ಲಿ ಶಾಂತಿ ಸ್ಥಾಪಿಸಲು ಗೃಹ ಸಚಿವ ಅಮಿತ್ ಶಾ 4 ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ರಾಜ್ಯದ ಎಲ್ಲ ಸಂತ್ರಸ್ತ ಸಮುದಾಯಗಳನ್ನು ಭೇಟಿ ಮಾಡಿ ಶಾಂತಿ ಕಾಪಾಡುವಂತೆ ಮನವಿ ಕೂಡಾ ಮಾಡಿದ್ದರು. ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಸೂಚಿಸಿದ್ದರು. ನಂತರ ಹಿಂಸಾಚಾರದ ತನಿಖೆಗೆ ಎಸ್‌ಐಟಿ ರಚಿಸಲಾಗಿತ್ತು. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಇದುವರೆಗೆ 57 ಶಸ್ತ್ರಾಸ್ತ್ರಗಳು, 23 ಬಾಂಬ್‌ಗಳು ಮತ್ತು 1588 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.