ಪುಲ್ವಾಮಾದಲ್ಲಿ 3 LeT ಭಯೋತ್ಪಾದಕರು ಹತ್ಯೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ

Pulwama: ಮೂವರು ಸ್ಥಳೀಯ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ಭಾನುವಾರ (ಜೂನ್ 12, 2022) ತಿಳಿಸಿದ್ದಾರೆ.

Written by - Chetana Devarmani | Last Updated : Jun 12, 2022, 11:22 AM IST
  • ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್‌ಕೌಂಟರ್‌
  • ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ
  • ಪುಲ್ವಾಮಾದಲ್ಲಿ 3 LeT ಭಯೋತ್ಪಾದಕರು ಹತ್ಯೆ
ಪುಲ್ವಾಮಾದಲ್ಲಿ 3 LeT ಭಯೋತ್ಪಾದಕರು ಹತ್ಯೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ title=
ಲಷ್ಕರ್-ಎ-ತೈಬಾ

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಮೂವರು ಸ್ಥಳೀಯ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ಭಾನುವಾರ (ಜೂನ್ 12, 2022) ತಿಳಿಸಿದ್ದಾರೆ. ಕಾಶ್ಮೀರದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ವಿಜಯ್ ಕುಮಾರ್, "ಪುಲ್ವಾಮಾ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಲಾಗಿದೆ" ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ: ಬಿಜೆಪಿ ಸೇರಲು ಸಿದ್ಧತೆ ನಡೆಸಿದ್ರಾ ಮಾಜಿ ಸಂಸದ ಶಿವರಾಮೇಗೌಡ!?

ಮೂವರು ಭಯೋತ್ಪಾದಕರನ್ನು ಕೊಲ್ಲಲಾಗಿದೆ. ಭಯೋತ್ಪಾದಕರು ಸ್ಥಳೀಯರು, ಎಲ್ಇಟಿ ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆ. ಅವರಲ್ಲಿ ಒಬ್ಬನನ್ನು ಜುನೈದ್ ಶೀರ್ಗೋಜ್ರಿ ಎಂದು ಗುರುತಿಸಲಾಗಿದೆ, ಮೇ 13 ರಂದು ಗದೂರ ಪುಲ್ವಾಮಾದಲ್ಲಿ ನಮ್ಮ ಸಹೋದ್ಯೋಗಿ ಹುತಾತ್ಮ ರಿಯಾಜ್ ಅಹ್ಮದ್ ಹತ್ಯೆಯಲ್ಲಿ ಈತ ಭಾಗಿಯಾಗಿದ್ದ. ಹತ್ಯೆಗೀಡಾದ ಇತರ ಇಬ್ಬರು ಉಗ್ರರನ್ನು ಪುಲ್ವಾಮಾ ಜಿಲ್ಲೆಯ ಫಾಜಿಲ್ ನಜೀರ್ ಭಟ್ ಮತ್ತು ಇರ್ಫಾನ್ ಅಹ್ ಮಲಿಕ್ ಎಂದು ಗುರುತಿಸಲಾಗಿದೆ. ಎನ್‌ಕೌಂಟರ್ ಸ್ಥಳದಿಂದ 02 ಎಕೆ 47 ರೈಫಲ್‌ಗಳು ಮತ್ತು 1 ಪಿಸ್ತೂಲ್ ಸೇರಿದಂತೆ ದೋಷಾರೋಪಣೆಯ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ತಿಳಿಸಿದ್ದಾರೆ. 

ಶನಿವಾರ ಸಂಜೆ 6.55ಕ್ಕೆ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ದ್ರಾಬ್‌ಗಾಮ್ ಗ್ರಾಮದಲ್ಲಿ ಆರಂಭವಾದ ಕಾರ್ಯಾಚರಣೆಯಲ್ಲಿ 11 ಗಂಟೆಗಳ ಕಾರ್ಯಾಚರಣೆಯ ನಂತರ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ. ಈ ಹಿಂದೆ ರಾತ್ರಿಯ ವೇಳೆ ಕುಲ್ಗಾಮ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹಿಜ್ಬ್ ಭಯೋತ್ಪಾದಕ ಸಂಘಟನೆಯ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು.

ಇದನ್ನೂ ಓದಿ: ಈ ಸೂಪರ್ ಹಿಟ್ ಯೋಜನೆಯಲ್ಲಿ 50 ಸಾವಿರ ಠೇವಣಿ ಇರಿಸಿ, 3300 ಪಿಂಚಣಿ ಪಡೆಯಿರಿ

ಇದು ಈ ವರ್ಷದ 60 ನೇ ಎನ್‌ಕೌಂಟರ್ ಆಗಿದೆ. ಭದ್ರತಾ ಪಡೆಗಳು ಈ ಎಲ್ಲ ಕಾರ್ಯಾಚರಣೆಗಳಲ್ಲಿ 28 ಪಾಕಿಸ್ತಾನಿ ಸೇರಿದಂತೆ 95 ಭಯೋತ್ಪಾದಕರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 47 ಸಕ್ರಿಯ ಭಯೋತ್ಪಾದಕರು ಮತ್ತು ಅವರ 185 ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಆದಾಗ್ಯೂ, ಈ ವರ್ಷ ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆಗಳಲ್ಲಿ 17 ನಾಗರಿಕರು ಮತ್ತು 16 ಭದ್ರತಾ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News