close

News WrapGet Handpicked Stories from our editors directly to your mailbox

ಬಾಲಕಿಗೆ ಲೈಂಗಿಕ ಕಿರುಕುಳ, ತಂದೆ ಸೇರಿ ಮೂವರ ಬಂಧನ

ಬಾಲಕಿಯ ತಂದೆಯನ್ನು ಅಪರಾಧಕ್ಕೆ ಪ್ರಚೋದಿಸಿದ ಆರೋಪದ ಮೇಲೆ ಹಾಗೂ ಅಸ್ರಾಫ್ ಮತ್ತು ಶೈಜು ಎಂಬುವರನ್ನು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ.

Updated: Sep 23, 2019 , 04:17 PM IST
ಬಾಲಕಿಗೆ ಲೈಂಗಿಕ ಕಿರುಕುಳ, ತಂದೆ ಸೇರಿ ಮೂವರ ಬಂಧನ

ಮಲ್ಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ತಿರುರಂಗಡಿ ಪಟ್ಟಣದಲ್ಲಿ 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಕೆಯ ತಂದೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ತಂದೆಯನ್ನು ಅಪರಾಧಕ್ಕೆ ಪ್ರಚೋದಿಸಿದ ಆರೋಪದ ಮೇಲೆ ಹಾಗೂ ಅಸ್ರಾಫ್ ಮತ್ತು ಶೈಜು ಎಂಬುವರನ್ನು ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ಮತ್ತು ಪೊಕ್ಸೊ ಕಾಯ್ದೆ 2012ರ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸದ್ಯ ಮಗುವನ್ನು ಮಕ್ಕಳ ಕಲ್ಯಾಣ ಆಶ್ರಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.