ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಪಾಕ್ ದಾಳಿ: ಅಪ್ರಾಪ್ತ ಬಾಲಕಿ ಸೇರಿದಂತೆ 3 ಜನರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಭಾನುವಾರ ಪಾಕಿಸ್ತಾನ ಸೈನ್ಯವು ಹಳ್ಳಿಗಳ ಮೇಲೆ ದಾಳಿ ನಡೆಸಿ, ಈ ಸಂದರ್ಭದಲ್ಲಿ ಮೂರು ಜನ ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

Last Updated : Jun 17, 2019, 09:48 AM IST
ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಪಾಕ್ ದಾಳಿ: ಅಪ್ರಾಪ್ತ ಬಾಲಕಿ ಸೇರಿದಂತೆ 3 ಜನರಿಗೆ ಗಾಯ title=
File Image

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆಯ ಸಂದರ್ಭದಲ್ಲಿ ಪಾಕಿಸ್ತಾನ ಸೇನೆಯು ಗ್ರಾಮಗಳ ಮೇಲೆ ಶೆಲ್ ದಾಳಿ ನಡೆಸಿದ ಸಂದರ್ಭದಲ್ಲಿ 11 ವರ್ಷದ ಬಾಲಕಿ ಸೇರಿದಂತೆ ಮೂವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ಭಾನುವಾರ ಸುಮಾರು ಸಂಜೆ 07:30ರ ವೇಳೆಯಲ್ಲಿ ಪಾಕಿಸ್ತಾನ ಸೇನೆಯು ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗೆ ಚಾಲನೆ ನೀಡಿತು, ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿಯಿಂದ ಪ್ರಾರಂಭವಾಯಿತು ಮತ್ತು ನಂತರ ಪೂಂಚ್ ಸೆಕ್ಟರ್‌ನಲ್ಲಿ ಲೈನ್ ಆಫ್ ಕಂಟ್ರೋಲ್ (ಎಲ್‌ಒಸಿ) ಉದ್ದಕ್ಕೂ ಶೆಲ್ ದಾಳಿ ನಡೆಯಿತು" ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಪಾಕಿಸ್ತಾನದ ಈ ದಾಳಿಗೆ ಭಾರತೀಯ ಸೇನೆ ಸೂಕ್ತ ಪ್ರತೀಕಾರ ನೀಡುತ್ತಿದೆ ಎಂದು ಅವರು ಹೇಳಿದರು. ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ, ಕಾನೋಟ್ ಫಾರ್ವರ್ಡ್ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮರಿಯಮ್ ಬಿ ಮತ್ತು ಶಹಪುರ್ ಫಾರ್ವರ್ಡ್ ಗ್ರಾಮದಲ್ಲಿ ರಜಿಯಾ ಮತ್ತು ಪೋರ್ಟರ್ ಅಕ್ಬರ್ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗಾಯಗೊಂಡ ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಕತುವಾ ಜಿಲ್ಲೆಯ ಹಿರಾನಗರ್ ಸೆಕ್ಟರ್‌ನಲ್ಲಿರುವ ಅಂತರರಾಷ್ಟ್ರೀಯ ಗಡಿಯಲ್ಲಿ ಗಡಿ ಹೊರಠಾಣೆಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ರೇಂಜರ್ಸ್ ಮಂಗಳವಾರ ಕದನ ವಿರಾಮವನ್ನು ಉಲ್ಲಂಘಿಸಿದ್ದು, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಪರಿಣಾಮಕಾರಿಯಾಗಿ ಪ್ರತೀಕಾರ ತೀರಿಸಿತು.

 

Trending News