ಕಾನ್ಪುರ: ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಅನೇಕ ಪ್ರದೇಶಗಳು ಹಾನಿಗೊಳಗಾಗಿವೆ. ಈ ಅನುಕ್ರಮದಲ್ಲಿ, ಕಾನ್ಪುರದ ಫಿಲ್ಖಾನಾ ಪ್ರದೇಶದಲ್ಲಿರುವ ಮೂರು ಅಂತಸ್ತಿನ ಹಳೆಯ ಕಟ್ಟಡ ಮಂಗಳವಾರ ಕುಸಿದುಬಿದ್ದಿದ್ದು, ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಪೊಲೀಸರು ಘಟನಾ ಸ್ಥಳ ತಲುಪಿದ್ದಾರೆ. ಆದರೆ, ಕಟ್ಟಡದ ಅವಶೇಷಗಳಡಿ ಯಾರಾದರೂ ಸಿಲುಕಿರುವ ಬಗ್ಗೆ ಯಾವುದೇ ಮಾಹಿತಿ ಇದುವರೆಗೂ ಲಭ್ಯವಾಗಿಲ್ಲ.



COMMERCIAL BREAK
SCROLL TO CONTINUE READING

ಮಳೆಯಿಂದಾಗಿ ಕಾನ್ಪುರದ ನಝೀರಾಬಾದ್ ಪೊಲೀಸ್ ಠಾಣಾ ಪ್ರದೇಶದಲ್ಲಿ ಮೂವತ್ತು ಅಡಿ ರಸ್ತೆಯು ಹಾನಿಗೊಳಗಾಗಿರುವ ಬಗ್ಗೆ ವರದಿಯಾಗಿದೆ. ಭಾರೀ ಮಳೆಯ ಪ್ರಭಾವದಿಂದ ಈ ಪ್ರದೇಶ ಸುತ್ತಮುತ್ತಲ ಪ್ರದೇಶಗಳಲ್ಲಿ ಕಟ್ಟಡ ಕುಸಿಯುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಅಪಾಯದ ಅಂಚಿನಲ್ಲಿರುವ ಮನೆಗಳನ್ನು ಸ್ಥಳಾಂತರಗೊಳಿಸಲಾಗಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿದಂತೆ ಎಚ್ಚರ ವಹಿಸಿರುವ ಪೊಲೀಸ್ ಇಲಾಖೆ ಆ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.