ಜಮ್ಮು-ಕಾಶ್ಮೀರ: ಟ್ರಾಲ್ ಎನ್‌ಕೌಂಟರ್‌ನಲ್ಲಿ 3 ಉಗ್ರರ ಹತ್ಯೆ
ಉಗ್ರರಿಂದ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆ ವಶಪಡಿಸಿಕೊಂಡಿದೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ ಭದ್ರತಾ ಪಡೆ ಮತ್ತು ಜೈಶ್-ಎ-ಮೊಹಮ್ಮದ್ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.
ಉಗ್ರರ ಮೃತದೇಹಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದು, ಅವರಿಂದ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆ ವಶಪಡಿಸಿಕೊಂಡಿದೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಸುತ್ತಮುತ್ತ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಆಧಾರದ ಮೇಲೆ ಭದ್ರತಾ ಪಡೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಈ ಸಂದರ್ಭದಲ್ಲಿ, ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತೀಕಾರವಾಗಿ ಭದ್ರತಾ ಪದೆಯಿಂದಲೂ ಗುಂಡಿನ ದಾಳಿ ನಡೆದಿದ್ದು ಈವರೆಗೂ ಮೂವರು ಉಗ್ರರನ್ನು ಸದೆಬಡಿಯಲಾಗಿದೆ.
ಕಾರ್ಯಾಚರಣೆ ನಡೆದ ಪ್ರದೇಶದಲ್ಲಿ 2 ಎಕೆ-47, ಹಾಗೂ ಒಂದು ಪಿಸ್ತೂಲನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತಷ್ಟು ಉಗ್ರರು ಅಡಗಿರುವ ಮಾಹಿತಿ ಇದ್ದು, ಅವರಿಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ.