ನವದೆಹಲಿ: ಚಲಿಸುತ್ತಿದ್ದ ಬಸ್ಸೊಂದು ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಸುಮಾರು 20 ಮಂದಿ ಸಾವನ್ನಪ್ಪಿದ ಧಾರುಣ ಘಟನೆ ಉತ್ತರಾಖಂಡ್'ನ ಪೌರಿ ಗರ್ವಾಲ್ ಜಿಲ್ಲೆಯ ನಾನಿಧಂಡ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. 


COMMERCIAL BREAK
SCROLL TO CONTINUE READING

ಬೋವಾನ್'ನಿಂದ ರಾಮ್ನಗರ ಮಾರ್ಗವಾಗಿ ಚಲಿಸುತ್ತಿದ್ದ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿದ ಹಿನೆಲೆಯಲ್ಲಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ. ಈ ಘಟನೆಯಲ್ಲಿ 20 ಮಂದಿ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ 12 ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 



ಮೃತರ ಸಂಖ್ಯೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು NDRF ಹೇಳಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ರಕ್ಷಣಾ ತಂಡಗಳು ಧಾವಿಸಿದ್ದು ಕಾರ್ಯಾಚರಣೆ ಮುಂದುವರೆದಿದೆ.