ತ್ರಿಪುರಾದಲ್ಲಿ ಪ್ರಪಾತಕ್ಕೆ ಉರುಳಿದ ಬಸ್; 30 ಪ್ರಯಾಣಿಕರಿಗೆ ಗಾಯ

ಗಾಯಾಳುಗಳ ಚಿಕಿತ್ಸೆಗೆ ಅಗತ್ಯವಾದ ಎಲ್ಲಾ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ಹೇಳಿದ್ದಾರೆ.

Updated: Dec 5, 2018 , 11:23 AM IST
ತ್ರಿಪುರಾದಲ್ಲಿ ಪ್ರಪಾತಕ್ಕೆ ಉರುಳಿದ ಬಸ್; 30 ಪ್ರಯಾಣಿಕರಿಗೆ ಗಾಯ

ಅಗರ್ತಲಾ: ಚಲಿಸುತ್ತಿದ್ದ ಬಸ್ಸೊಂದು ಆಯಾ ತಪ್ಪಿ ಪ್ರಪಾತಕ್ಕೆ ಬಿದ್ದ ಪರಿಣಾಮ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತ್ರಿಪುರದ ದಾಲೈ ಜಿಲ್ಲೆಯ ಗಂದಚಾರ ಅಮರ್ಪುರ್ ರಸ್ತೆಯಲ್ಲಿ ಮಂಗಳವಾರ ನಡೆದಿದೆ. 

ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಸಾರ್ವಜನಿಕರ ಸಹಾಯದೊಂದಿಗೆ ಗಾಯಗೊಂಡಿದ್ದ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಗೊಂಡವರಲ್ಲಿ 22 ಪ್ರಯಾಣಿಕರ ಸ್ಥಿತಿ ತೀವ್ರ ಗಂಭೀರವಾಗಿದೆ. 

ಮುಖ್ಯಮಂತ್ರಿ ಬಿಪ್ಲಾಬ್ ಕುಮಾರ್ ದೇಬ್ ಹಿರಿಯ ಅಧಿಕಾರಿಗಳೊಂದಿಗೆ ಜಿಬಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದು, ಅವರ ಚಿಕಿತ್ಸೆಗೆ ಅಗತ್ಯವಾದ ಎಲ್ಲಾ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ ಎಂದಿದ್ದಾರೆ.

"ಗಾಯಾಳುಗಳ ಶೀಘ್ರ ಚೇತರಿಕೆಗೆ ಆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಅಪಘಾತಕ್ಕೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುವುದು. ಹಾಗೆಯೇ ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ" ಎಂದಿದ್ದಾರೆ.