ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶ ಅಥವಾ ಗೋವಾದಲ್ಲಿ ಮಹಿಳಾ ಮತದಾರರನ್ನು ಸೆಳೆಯುವ ಹಾದಿಯಲ್ಲಿದ್ದಾರೆ.


COMMERCIAL BREAK
SCROLL TO CONTINUE READING

ಯುಪಿಯಲ್ಲಿ ಮಹಿಳೆಯರಿಗಾಗಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ನಂತರ, ಶುಕ್ರವಾರದಂದು ವಾದ್ರಾ ಅವರು 2022 ರ ವಿಧಾನಸಭಾ ಚುನಾವಣೆಯಲ್ಲಿ ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಉದ್ಯೋಗಗಳಲ್ಲಿ ಶೇಕಡಾ 30 ರಷ್ಟು ಮೀಸಲಾತಿ ನೀಡುವುದಾಗಿ ಭರವಸೆ ನೀಡಿದರು.


ಇದನ್ನೂ ಓದಿ: ಈ RD ಯೋಜನೆಗಳಲ್ಲಿ ನಿಮಗೆ ಸಿಗಲಿದೆ ಶೇ.8.5 ರಷ್ಟು ವಾರ್ಷಿಕ ಬಡ್ಡಿಯ ಲಾಭ


ಗೋವಾಕ್ಕೆ ತನ್ನ ಒಂದು ದಿನದ ಭೇಟಿಯ ಸಂದರ್ಭದಲ್ಲಿ ಅಕ್ವೆಮ್‌ನಲ್ಲಿ ನಡೆದ ಮಹಿಳಾ ಸಮಾವೇಶ ಪ್ರಿಯದರ್ಶಿನಿಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, 'ಗೋವಾ ಪ್ರವಾಸೋದ್ಯಮಕ್ಕೆ ಹೆಸರುವಾಸಿಯಾಗಿದೆ.ಪ್ರಪಂಚದಾದ್ಯಂತದ ಪ್ರವಾಸಿಗರು ಗೋವಾಕ್ಕೆ ಬರುತ್ತಾರೆ.ಆದರೆ, ಸಾಂಕ್ರಾಮಿಕ ಸಮಯದಲ್ಲಿ, ರಾಜ್ಯ ಸರ್ಕಾರವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಜನರಿಗೆ ಸಹಾಯ ಮಾಡಲಿಲ್ಲ. ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಶೇಕಡಾ 30 ರಷ್ಟು ಉದ್ಯೋಗವನ್ನು ಮೀಸಲಿಡುತ್ತದೆ.ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗೋವಾದಲ್ಲಿ ಅಧಿಕಾರಕ್ಕೆ ಬರಲಿದೆ"ಎಂದು ಹೇಳಿದರು.


ಇದನ್ನೂ ಓದಿ : ಈ ಐದು ರೂಪಾಯಿ ಬದಲಿಸಲಿದೆ ಅದೃಷ್ಟ, ಒಂದು ನಾಣ್ಯದ ಬದಲಿಗೆ ಸಿಗಲಿದೆ 10 ಲಕ್ಷ ರೂಪಾಯಿ


"ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ, ಮಹಿಳೆಯರ ಮೇಲಿನ ಅಪರಾಧಗಳ ಪ್ರಮಾಣ ಹೆಚ್ಚಾಗುತ್ತಿದೆ, ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ವರದಿಯಾದರೆ, ಬಿಜೆಪಿಯು ಸಂತ್ರಸ್ತೆಯನ್ನು ಪ್ರಶ್ನಿಸುತ್ತದೆ ಮತ್ತು ದೂಷಿಸುತ್ತದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಗೋವಾದ ಪ್ರತಿ ತಾಲೂಕಿನಲ್ಲಿ ಪೊಲೀಸ್ ಠಾಣೆ ಮತ್ತು ಪೊಲೀಸ್ ಠಾಣೆಯಲ್ಲಿ ಗರಿಷ್ಠ ಸಂಖ್ಯೆಯ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸುತ್ತದೆ ಎಂದು ವಾದ್ರಾ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.


ಇದನ್ನೂ ಓದಿ: ಪತ್ನಿ ಆತ್ಮಹತ್ಯೆಗೆ ಶರಣು, ಪತಿ ವಿರುದ್ಧ ಕಿರುಕುಳದ ಆರೋಪ


"ಬಿಜೆಪಿ ಗೋವಾದಲ್ಲಿ ಎಲ್ಲಾ ಸಂಪನ್ಮೂಲಗಳನ್ನು ತಮ್ಮ ಸ್ವಂತ ಹಿತಕ್ಕಾಗಿ ಬಳಸಿಕೊಂಡಿದೆ. ದಿನಕ್ಕೆ 20 ನಿಮಿಷ ಮಾತ್ರ ನೀರು ಸರಬರಾಜು ಮಾಡಲಾಗುತ್ತದೆ.ಅವರಿಗೆ ರಾಜ್ಯದ ಜನರ ಬಗ್ಗೆ ಯೋಚಿಸಲು ಸಮಯವಿಲ್ಲ.ಚುನಾವಣೆ ಗೆಲ್ಲುವುದರ ಮೇಲೆ ಮಾತ್ರ ಅವರ ಗಮನವಿದೆ.ಇದಲ್ಲದೆ,ಭಾರತದಲ್ಲಿನ ಸ್ವಸಹಾಯ ಗುಂಪುಗಳಿಗೆ (SHGs) ಕಾಂಗ್ರೆಸ್ 1 ಲಕ್ಷ ರೂಪಾಯಿಗಳನ್ನು ನೀಡುವುದಾಗಿ ವಾದ್ರಾ ಘೋಷಿಸಿದರು.


ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮೊರ್ಪಿರ್ಲಾ ಗ್ರಾಮಕ್ಕೆ ಭೇಟಿ ನೀಡಿ ಬುಡಕಟ್ಟು ಮಹಿಳೆಯರೊಂದಿಗೆ ಸಂವಾದ ನಡೆಸಿದರು, ಅಲ್ಲಿ ಅವರು ಅವರ ಸಾಂಪ್ರದಾಯಿಕ ನೃತ್ಯವನ್ನು ಪ್ರದರ್ಶಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.