ದೆಹಲಿಯಲ್ಲಿ ಭೀಕರ ಅಗ್ನಿ ದುರಂತ; 32 ಜನರ ದುರ್ಮರಣ

ಅಗ್ನಿ ದುರಂತದಲ್ಲಿ ಗಾಯಗೊಂಡವರನ್ನು ಬಡಾ ಹಿಂದೂರಾವ್, ರಾಮ್ ಮನೋಹರ್ ಲೋಹಿಯಾ ಮತ್ತು ಹತ್ತಿರದ ಇತರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

Last Updated : Dec 8, 2019, 09:26 AM IST
ದೆಹಲಿಯಲ್ಲಿ ಭೀಕರ ಅಗ್ನಿ ದುರಂತ; 32 ಜನರ ದುರ್ಮರಣ title=

ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ದೆಹಲಿಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ  32 ಜನರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ದೆಹಲಿಯ ಫಿಲ್ಮಿಸ್ತಾನ್ ಪ್ರದೇಶದ ಝಾನ್ಸಿ ರಾಣಿ ರಸ್ತೆಯಲ್ಲಿರುವ  ಅನಾಜ್ ಮಂಡಿ ಬಿಲ್ಡಿಂಗ್ನಲ್ಲಿ ಈ ದುರಂತ ಸಂಭವಿಸಿದ್ದು, ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ 30 ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿವೆ.

ಘಟನೆಯಲ್ಲಿ ಈವರೆಗೂ 50ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದ್ದು, ಗಾಯಗೊಂಡವರನ್ನು ಬಡಾ ಹಿಂದೂರಾವ್, ರಾಮ್ ಮನೋಹರ್ ಲೋಹಿಯಾ ಮತ್ತು ಹತ್ತಿರದ ಇತರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬೆಂಕಿ ತಗುಲಲು ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯ ಮುಂದುವರೆದಿದೆ.

ಜೀ ನ್ಯೂಸ್ ಜೊತೆ ಮಾತನಾಡಿದ ದೆಹಲಿ ಅಗ್ನಿಶಾಮಕ ಸೇವೆಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಅತುಲ್ ಗರ್ಗ್, ಉಸಿರುಗಟ್ಟಿಸುವುದರಿಂದ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು. ಇನ್ನೂ ಕೆಲವರು ಕಟ್ಟಡದೊಳಗೆ ಸಿಕ್ಕಿಬಿದ್ದಿದ್ದಾರೆ ಮತ್ತು ಅವರನ್ನು ಸುರಕ್ಷಿತವಾಗಿ ಹೊರಗೆ ತರಲು ಪ್ರಯತ್ನಿಸಲಾಗುತ್ತಿದೆ. ಈ ಪ್ರದೇಶವು ಕಿರಿದಾದ ಹಾದಿಗಳನ್ನು ಹೊಂದಿರುವ ಕಾರಣಾ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದವರು ತಿಳಿಸಿದರು.

ಕೆಲವು ಜನರಿಗೆ ಸುಟ್ಟ ಗಾಯಗಳಾಗಿದ್ದು, ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಗರ್ಗ್ ಹೇಳಿದ್ದಾರೆ. ಆಸ್ಪತ್ರೆಗಳಿಗೆ ದಾಖಲಿಸಿರುವವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೇ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
 

Trending News