ನವದೆಹಲಿ: ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ (Ahemedabad bomb blast case) 49 ಅಪರಾಧಿಗಳ ಪೈಕಿ 38 ಮಂದಿಗೆ ವಿಶೇಷ ನ್ಯಾಯಾಲಯವು ಇಂದು ಮರಣದಂಡನೆ ಶಿಕ್ಷೆಯನ್ನು ಪ್ರಕಟಿಸಿದೆ. ನ್ಯಾಯಾಲಯವು 11 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಜ್ಯದ ಅಲ್ಪಸಂಖ್ಯಾತರ ಶಾಲೆಗಳಲ್ಲಿ ಹಿಜಾಬ್ ನಿಷೇಧಿಸಿ ಆದೇಶ ಜಾರಿಗೊಳಿಸಿದ ಬೊಮ್ಮಾಯಿ ಸರ್ಕಾರ


ಅಹಮದಾಬಾದ್‌ನಲ್ಲಿ 2008ರ ಸರಣಿ ಬಾಂಬ್ ಸ್ಫೋಟದ (Ahmedabad bomb blast) ತ್ವರಿತ ವಿಚಾರಣೆಗಾಗಿ ರಚಿಸಲಾದ ವಿಶೇಷ ನ್ಯಾಯಾಲಯವು ಶುಕ್ರವಾರ (ಫೆಬ್ರವರಿ 18, 2022) ಯುಎಪಿಎ ಮತ್ತು ಐಪಿಸಿ 302 ರ ನಿಬಂಧನೆಗಳ ಅಡಿಯಲ್ಲಿ 49 ಅಪರಾಧಿಗಳ ಪೈಕಿ 38 ಅಪರಾಧಿಗಳಿಗೆ ಮರಣದಂಡನೆ (sentenced to death) ಶಿಕ್ಷೆ ವಿಧಿಸಿದೆ. ಇತರರಿಗೆ ಮರಣದ ತನಕ ಜೀವಾವಧಿ ಶಿಕ್ಷೆ (life imprisonment) ವಿಧಿಸಿ ಆದೇಶಿಸಿದೆ.


 


bomb blast) ಪ್ರಕರಣದಲ್ಲಿ 49 ಜನರನ್ನು ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿತು.


ಇದನ್ನೂ ಓದಿ: ಸಿಎಂ ಚನ್ನಿ ವಿರುದ್ಧ ಪ್ರತೀಕಾರ ತೀರಿಸಿಕೊಂಡ ಪ್ರಧಾನಿ ಮೋದಿ!


ಜುಲೈ 26, 2008 ರಂದು ಅಹಮದಾಬಾದ್‌ನಲ್ಲಿ (Ahmedabad) ಹಲವಾರು ಸ್ಥಳಗಳಲ್ಲಿ 22 ಬಾಂಬ್‌ಗಳು ಸ್ಫೋಟಗೊಂಡವು. ಸುಮಾರು 13 ವರ್ಷಗಳ ಕಾಲ ನಡೆದ ವಿಚಾರಣೆಯ ನಂತರ, ಫೆಬ್ರವರಿ 8 ರಂದು  ವಿಶೇಷ ನ್ಯಾಯಾಲಯವು  49 ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ, ಇತರ 28 ಜನರನ್ನು ಖುಲಾಸೆಗೊಳಿಸಿತು. ಈ ಪ್ರಕರಣವನ್ನು ಇತ್ತೀಚಿನ ವರ್ಷಗಳಲ್ಲಿ ಸುದೀರ್ಘ ಕ್ರಿಮಿನಲ್ ವಿಚಾರಣೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.