ಲಕ್ನೋ: ಭಾರತದಲ್ಲಿ ಬೀಸುತ್ತಿರುವ ಫೋನಿ ಚಂಡಮಾರುತದ ಎಫೆಕ್ಟ್ ಉತ್ತರಪ್ರದೇಶದಲ್ಲೂ ಕಾಣಿಸಿದ್ದು, ಗುರುವಾರ ರಾತ್ರಿ ಸುರಿದ ಸಿಡಿಲು ಸಹಿತ ಭಾರೀ ಆಲಿಕಲ್ಲು ಮಳೆಗೆ ವಿದ್ಯುತ್ ಕಂಬ ಬಿದ್ದು, ನಾಲ್ಕು ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಅಲ್ಲದೆ, ಐವರು ತೀವ್ರ ಗಾಯಗೊಂಡಿದ್ದಾರೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಅಲ್ಲದೆ, ಶುಕ್ರವಾರವೂ ಸಹ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮೃತರ ಕುಟುಂಬಗಳಿಗೆ ಅಗತ್ಯ ನೆರವು ನೀಡುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದೆ. 


ಉತ್ತರಪ್ರದೇಶದ ಚಾಂದೌಲಿ ಜಿಲ್ಲೆಯ ಸಾಹಬಗಂಜ್ ಠಾಣಾ ವ್ಯಾಪ್ತಿಯ ರಾಮ ಮಾಡೋ ಗ್ರಾಮದಲ್ಲಿ ಕಳೆದ ರಾತ್ರಿ ಬೀಸಿದ ಭಾರೀ ಬಿರುಗಾಳಿ ಮಳೆಗೆ ವಿದ್ಯುತ್ ತಗುಲಿ ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೆ ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.